ಅನುಪಮಾ ಶೆಣೈ 
ಪ್ರಧಾನ ಸುದ್ದಿ

ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕ

ಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ...

ಬೆಂಗಳೂರು: ಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ ಡಿವೈಎಸ್ಪಿಯಾಗಿ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.

ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರಿಗೆ ತೀವ್ರ ಮುಖಭಂಗವಾಗಿದ್ದು, ಎಸ್ ಪಿ ಅನುಪಮಾ ಶೆಣೈ ವರ್ಗಾವಣೆಯನ್ನು ರದ್ದುಗೊಳಿಸಿರುವ ಸರ್ಕಾರ ಕೂಡ್ಲಿಗಿ ಡೈವೈಎಸ್ಪಿಯಾಗಿ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.

ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕೂಡ್ಲಿಗಿ ಜನತೆ ಪ್ರತಿಭಟನೆ ನಡೆಸಿದ್ದು, ಬಂದ್ ಗೆ ಕರೆ ನೀಡಿದ್ದರು.

ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆ ಸ್ವೀಕರಿಸದ ಕಾರಣಕ್ಕೆ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಅಲ್ಲಿ ಅಧಿಕಾರ ಸ್ವೀಕರಿಸುವ ಮೊದಲೇ ಅವರಿಗೆ 15 ದಿನಗಳ ಕಾಲ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.

ಅನುಪಮಾ ಶೆಣೈ ಪರ ನಿಂತ ಮಾಜಿ ಸಂಸದೆ ರಮ್ಯಾ
ಇನ್ನೊಂದೆಡೆ ಅನುಪಮಾ ಶೆಣೈ ಅವರನ್ನು ಮತ್ತೆ ಕೂಡ್ಲಿಗಿ ಡಿವೈಎಸ್ಪಿಯಾಗಿ ಮರುನೇಮಕ ಮಾಡುವಂತೆ ಮಾಜಿ ಸಂಸದೆ ರಮ್ಯಾ ಅವರು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರೊಂದಿಗೆ ಮಾತನಾಡಿದ್ದು, ಅನುಪಮಾ ಅವರನ್ನು ಮರು ವರ್ಗಾವಣೆ ಮಾಡಿ ಕೂಡ್ಲಿಗಿಗೆ ಮತ್ತೆ ಡಿವೈಎಸ್ಪಿಯಾಗಿ ನೇಮಕ ಮಾಡುವ ಭರವಸೆ ನೀಡಿದ್ದಾರೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು. ಇದಾದ ಕೆಲ ಗಂಟೆಗಳ ನಂತರ ಶೆಣೈ ಅವರ ವರ್ಗಾವಣೆ ಆದೇಶದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!