ಲಾಹೋರ್: ಎಲ್ಲಿಯವರೆಗೂ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ಉಂಟಾಗುವುದಿಲ್ಲವೋ ಅಲ್ಲಿಯವರೆಗೂ ಪಾಕಿಸ್ತಾನ ಭಾರತ- ಅಮೆರಿಕದ ದ್ವಿಪಕ್ಷೀಯ ಸಂಬಂಧವನ್ನು ವಿರೋಧಿಸುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ತಿಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಸರ್ತಾಜ್ ಅಜೀಜ್ ಅಮೆರಿಕ- ಭಾರತದ ದ್ವಿಪಕ್ಷೀಯ ಸಂಬಂಧ ಪಾಕಿಸ್ತಾನ- ಭಾರತದ ಸಂಬಂಧದ ಮೇಲೆ ಪರಿಣಾಮ ಬೀರಬಾರದು. ಇದಕ್ಕೆ ಪೂರಕವಾಗಿ ಅಮೆರಿಕ ಸಹ ಸ್ಪಂದಿಸಿದ್ದು ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ತನಗೆ ಸಮಾನವಾದ ಮಿತ್ರ ರಾಷ್ಟ್ರಗಳೆಂದು ಪಾಕಿಸ್ತಾನ ಹೇಳಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.
ಪಾಕಿಸ್ತಾನದ ಹಿತಾಸಕ್ತಿಗಳ ವಿರುದ್ಧವಾಗಿ ಅಮೆರಿಕ ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧ ಇರುವುದಿಲ್ಲ, ಎರಡು ರಾಷ್ಟ್ರಗಳು ಅಮೆರಿಕಾಗೆ ಸಮಾನ ಮಿತ್ರ ರಾಷ್ಟ್ರಗಳೆಂದು ಎಂದು ಅಮೆರಿಕ ಸ್ಪಷ್ಟವಾಗಿ ಹೇಳಿದೆ. ಒಂದು ವೇಳೆ ಭಾರತ-ಅಮೆರಿಕದ ದ್ವಿಪಕ್ಷೀಯ ಸಂಬಂಧ, ಭಾರತ-ಪಾಕಿಸ್ತಾನದ ಸಂಬಂಧಕ್ಕೆ ಧಕ್ಕೆ ಉಂಟಾಗುವಂತಿದ್ದರೆ ಅದಕ್ಕೆ ಪಾಕಿಸ್ತಾನ ಪ್ರತ್ಯುತ್ತರ ನೀಡಲಿದೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.