ಜೆ.ಪರಮೇಶ್ವರ 
ಪ್ರಧಾನ ಸುದ್ದಿ

ಆತ್ಮಹತ್ಯೆಗೆ ಶರಣಾದ ಡಿವೈಎಸ್ಪಿ ಕಲ್ಲಪ್ಪ ಅಮಾನತು ಬಗ್ಗೆ ಸಿಐಡಿ ತನಿಖೆ: ಪರಮೇಶ್ವರ

10 ಲಕ್ಷ ರುಪಾಯಿಗಾಗಿ ಯುವಕನನ್ನು ಕಿಡ್ನಾಪ್ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ...

ಬೆಂಗಳೂರು: 10 ಲಕ್ಷ ರುಪಾಯಿಗಾಗಿ ಯುವಕನನ್ನು ಕಿಡ್ನಾಪ್ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ಇಂದು ವಿಧಾನಸೌಧದ ಡಿವೈಎಸ್ಪಿ ಕಲ್ಪಪ್ಪ ಆತ್ಮಹತ್ಯೆ ಹಾಗೂ ಕಿಡ್ನಾಪ್ ಮಾಡಿಸಿದ ಪ್ರಕರಣದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಕಲ್ಲಪ್ಪ ವಿರುದ್ಧ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿತ್ತು. ಆದರಿಂದ ಮನನೊಂದು ಈಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದೇವೆ. ಉದ್ದೇಶಪೂರ್ವಕವಾಗಿ ಅವರನ್ನು ಪ್ರಕರಣದಲ್ಲಿ ಸಿಕ್ಕಿಹಾಕಿಸಲಾಗಿಯೇ ಅಥವಾ ಅವರೇ ಭಾಗಿಯಾಗಿದ್ದರೋ ಎಂಬುದರ ಬಗ್ಗೆ ಹಾಗೂ ಆತ್ಮಹತ್ಯೆಯ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದರು.
ಕಲ್ಲಪ್ಪ ಹಂಡಿಭಾಗ್ ಅವರು ಹಣಕ್ಕಾಗಿ ತನ್ನನ್ನು ಕಿಡ್ನಾಪ್ ಮಾಡಿಸಿ 10 ಲಕ್ಷ ರುಪಾಯಿ ಪಡೆದಿದ್ದಾರೆ ಎಂದು ಆರೋಪಿಸಿ ತೇಜಸ್ ಎಂಬ ಯುವಕ ನಿನ್ನೆ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ಹಂಡಿಭಾಗ್ ಅವರನ್ನು ಅಮಾನತು ಮಾಡಿ ತನಿಖೆ ನಡೆಸುವಂತೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಆದೇಶ ನೀಡಿದ್ದರು. ಇದರ ಬೆನ್ನಲ್ಲೇ ಹಂಡಿಭಾಗ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಮಗಳೂರು ಎಸ್ಪಿ ವಿರುದ್ಧ ಕಿರುಕುಳದ ಆರೋಪ
ಈ ಮಧ್ಯೆ ಕಲ್ಲಪ್ಪ ಹಂಡಿಭಾಗ್ ಅವರ ಮಾವ ಸಿದ್ರಾಮಪ್ಪ ಅವರು ಚಿಕ್ಕಮಗಳೂರು ಡಿವೈಎಸ್ಪಿಯಾಗಿದ್ದ ತಮ್ಮ ಅಳಿಯನಿಗೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕೆಲವು ಸಂಘಟನೆಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video