ದೆಹಲಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ 
ಪ್ರಧಾನ ಸುದ್ದಿ

ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಐದು ದಿನಗಳ ಸಿಬಿಐ ವಶಕ್ಕೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ಐದು ದಿನಗಳ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ಐದು ದಿನಗಳ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 
ಅಧಿಕಾರ ದುರುಪಯೋಗ ಪಡಿಸಿಕೊಂಡು ಟೆಂಡರ್ ನೀಡಿದ 9.5 ಕೋಟಿ ರುಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಂದ್ರ ಕುಮಾರ್ ಹಾಗೂ ಎಂಡೊವರ್ ಸಿಸ್ಟಮ್ಸ್ ಪ್ರೈವೇಟ್ ಲಿ. ಕಂಪನಿಯ ನಿರ್ದೇಶಕಾರನ್ನು ಸೇರಿದಂತೆ ಐವರನ್ನು ಸಿಬಿಐ ಅಧಿಕಾರಿಗಳು ನೆನ್ನೆ ವಶಕ್ಕೆ ಪಡೆದಿದ್ದರು. 
ಕುಮಾರ್ ಅವರು 2006ರಲ್ಲಿ ಎಂಡೊವರ್ ಸಿಸ್ಟಮ್ಸ್ ಪ್ರೈವೇಟ್ ಲಿ. ಎಂಬ ಕಂಪನಿಯನ್ನು ಸ್ಥಾಪಿಸಿ, ಸರ್ಕಾರಕ್ಕೆ ಸಾಫ್ಟವೇರ್ ಒದಗಿಸುವ ಗುತ್ತಿಗೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.
ಕುಮಾರ್ ಅವರು 1989ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಕೇಜ್ರಿವಾಲ್ ಅವರು ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ಕಳೆದ ಫೆಬ್ರವರಿಯಲ್ಲಿ ತಮ್ಮ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!