ಎಂ.ಕೆ.ಗಣಪತಿ - ಕಲ್ಲಪ್ಪ ಹಂಡಿಭಾಗ್
ನವದೆಹಲಿ: ಮುಂಗಾರು ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ರಾಜ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ವರದಿ ನೀಡುವಂತೆ ಸೋಮವಾರ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಸೂಚಿಸಿದೆ.
ಇತ್ತೀಚಿಗಷ್ಟೇ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಹಾಗೂ ಮಂಗಳೂರಿನ ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಶರಣಾಗಿದ್ದರು.
ಈ ಎರಡು ಪ್ರಕರಣಗಳ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಇಂದು ಕೆಪಿಸಿಸಿಗೆ ಸೂಚಿಸಿದೆ.
ಈ ಮಧ್ಯ ಇಂದಿನಿಂದ ಪುನಾರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಮುಖ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರ ಈಗ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದೆ ಎಂದು ವ್ಯಂಗ್ಯವಾಡಿದೆ.