ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಕೊಡಲ್ಲ: ಸದನದಲ್ಲಿ ಸಿಎಂ ಸ್ಪಷ್ಟನೆ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಸುಮಾರು 3 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ ಎಂದರು. 
ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂಕೆ ಗಣಪತಿ ಆತ್ಮಹತ್ಯೆಯಿಂದ ತುಂಬಾ ದುಃಖವಾಗಿದೆ. ಇಬ್ಬರೂ ಸಹ ಯಂಗ್ ಆಫೀಸರ್ಸ್ಸ್. ಇಬ್ಬರ ಸಾವಿನಿಂದ ಪೊಲೀಸ್ ಇಲಾಖೆಗೆ ನಷ್ಟವಾಗಿದೆ. ಸರ್ಕಾರದ ವತಿಯಿಂದ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಅಲ್ಲದೇ ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ ಎಂದರು.
ರಾಜ್ಯದಲ್ಲಿ ಮಳೆ, ಬೆಳೆ ಆಗಲಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೆಲ್ಲ ಸ್ನೇಹಿತರು, ನೆಂಟರು ಎಲ್ಲರೂ ಆತ್ಮಸ್ಥೈರ್ಯ ತುಂಬಬೇಕು. ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ.ಎಲ್ಲವನ್ನೂ ಜೀವನದಲ್ಲಿ ಎದುರಿಸಬೇಕಾಗುತ್ತದೆ. ದಯಮಾಡಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾವಿರ ವರ್ಷ ಆಯುಸ್ಸು ಎಂದು ಸಿದ್ದರಾಮಯ್ಯ ಹೇಳಿದರು.
ಗಣಪತಿ ಅವರು ಮಾಧ್ಯಮಕ್ಕೆ ನೀಡಿದ್ದು ಕೇವಲ ಹೇಳಿಕೆಯ ಅಷ್ಟೇ. ಆದ್ದರಿಂದ ಅದು ಡೈಯಿಂಗ್ ಡಿಕ್ಲೇರೇಷನ್ ಆಗಲ್ಲ. ಕಿರುಕುಳದ ಬಗ್ಗೆ ಗಣಪತಿ ಮೇಲಾಧಿಕಾರಿಗಳಿಗೆ ದೂರು ಕೊಟ್ಟಿರಲಿಲ್ಲ. ನಮ್ಮ ಸರ್ಕಾರಕ್ಕೂ ಮಾನವೀಯ ಸ್ಪರ್ಶ ಇದೆ. ನಮಗೂ ಮಾನವೀಯತೆ ಇದೆ. ನಮ್ಮ ಹೇಳಿಕೆಯಿಂದ ಗಣಪತಿ ಪತ್ನಿ ಪಾವನಾರಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.
ಸಿಆರ್ ಪಿಸಿ 174ಅಲ್ಲ, 154ರ ಅಡಿ ಕೇಸ್ ದಾಖಲಿಸಬೇಕು ಎಂದು ಕುಮಾರಿಸ್ವಾಮಿ ಹೇಳೋದು ಸರಿಯಲ್ಲ. ಗಣಪತಿ ಮಾಧ್ಯಮ ಹೇಳಿಕೆ ಮರಣಪೂರ್ವ ಹೇಳಿಕೆ ಆಗಲ್ಲ.ಗಣಪತಿ ಹೇಳಿಕೆ ಮತ್ತು ಆತ್ಮಹತ್ಯೆಗೆ ಸಂಬಂಧವೇ ಇಲ್ಲ. ಅಂತಹ ಯಾವುದೇ ಚಾನ್ಸ್ ಈ ಕೇಸ್ ನಲ್ಲಿ ಇಲ್ಲ.ಸಿಆರ್ ಪಿಸಿ 154 ಯಾವಾಗ ಬರುತ್ತೆ ಅಂದರೆ.  ಗುರುತರ ಅಪರಾಧ ಎಂದು ಶಂಕೆ ಬಂದರೆ ಮಾತ್ರ. ಗಣಪತಿ ಪ್ರಕರಣದಲ್ಲಿ ಗುರುತರ ಅಪರಾಧ ಕಂಡು ಬಂದಿಲ್ಲ. ಈ ಪ್ರಕರಣದಲ್ಲಿ ಕಾಗ್ನಿಜಬಲ್ ಎಂದು ತನಿಖಾಧಿಕಾರಿಗೆ ಕಂಡು ಬಂದರೆ 154ರ ಅಡಿ ಕೇಸ್ ದಾಖಲಿಸಿಕೊಳ್ಳಬಹುದು. ಈ ರೀತಿ ಸಾಕಷ್ಟು ಪ್ರಕರಣಗಳು ಸುಪ್ರೀಂ ತೀರ್ಪಿನಲ್ಲಿದೆ ಎಂದು ಸಿಎಂ ಉಲ್ಲೇಖಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT