ಪ್ರಧಾನ ಸುದ್ದಿ

ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ ಸರ್ಕಾರದಿಂದ ಸಹಾಯ: ಸಿಎಂ

Lingaraj Badiger
ಬೆಂಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಭರವಸೆ ನೀಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಕಲ್ಲಪ್ಪ ಹಂಡಿಭಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ, ವಿಶೇಷ ಪ್ರಕರಣ ಅಂತ ಪರಿಗಣಿಸಿ ಕಲ್ಲಪ್ಪ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಮತ್ತು ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು,
ಇನ್ನು ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಅವರು, ಕಲ್ಪಪ್ಪ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರೊಬ್ಬರ ಕೈವಾಡ ಇದೆ ಎಂದು ಆರೋಪಿಸಿದರು, 
ನಡಹಳ್ಳಿ ಆರೋಪ ಕಲಾಪದಲ್ಲಿ ಕೆಲಕಾಲ ಬಿಸಿ, ಬಿಸಿ ಚರ್ಚೆಗೆ ಕಾರಣವಾಯ್ತು. ಈ ರೀತಿ ಹೇಳಬಾರದು..ಇದು ಬಹಳ ಕಷ್ಟ ಆಗುತ್ತೆ. ಎಲ್ಲರ ಮೇಲೂ ಸಂಶಯ ಬರೋ ಹಾಗೆ ಆಗುತ್ತೆ ಎಂದು ಸಚಿವ ರಮೇಶ್ ಕುಮಾರ್ ಆತಂಕ ವ್ಯಕ್ತಪಡಿಸಿ. ಯಾರು ಅಂತ ಹೆಸರು ಹೇಳಿಬಿಡಲಿ ಎಂದು ಸಲಹೆ ನೀಡಿದರು. 
ಈ ಬಗ್ಗೆ ಮತ್ತೆ ಪ್ರಸ್ತಾಪ ಆದಾಗ ನಡಹಳ್ಳಿ ಅವರು ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಪ್ರಕಟವಾದ ವರದಿಯನ್ನು ಓದಿ...ತನಿಖಾಧಿಕಾರಿಗಳು ತನಿಖೆ ನಡೆಸಲಿ. ನನ್ನ ಬಳಿ ದಾಖಲೆ ಇದೆ. ಸಮಯ ಬಂದಾಗ ಬಹಿರಂಗ ಪಡಿಸುತ್ತೇನೆ ಎಂದರು.
SCROLL FOR NEXT