ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಜಾರ್ಜ್ ರಾಜಿನಾಮೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಸೋನಿಯಾ ಗಾಂಧಿ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಸಚಿವ ಕೆ.ಜೆ. ಜಾರ್ಜ್ ಅವರ....

ಸೋನಿಯಾ ಗಾಂಧಿ - ಸಿದ್ದರಾಮಯ್ಯ
Lingaraj Badiger
Updated On : 14 Jul 2016, 4:33 am
ನವದೆಹಲಿ: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂದೇಶ ರವಾನಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಜಾರ್ಜ್ ಅವರ ರಾಜಿನಾಮೆ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ಸ್ವತಂತ್ರರಾಗಿದ್ದು, ಆ ಬಗ್ಗೆ ಅವರ ನಿರ್ಧಾರ ಅಂತಿಮ ಎಂದು ಸೋನಿಯಾ ಹೇಳಿರುವುದಾಗಿ ವರದಿ ವಿವರಿಸಿದೆ.
ಜಾರ್ಜ್ ಅವರು ಸೋನಿಯಾ ಗಾಂಧಿ ಅವರಿಗೂ ಆಪ್ತರಾಗಿದ್ದು, ಗಣಪತಿ ಪ್ರಕರಣದ ಬಗ್ಗೆ ನಿನ್ನೆಯವರೆಗೆ ನಡೆದ ಬೆಳವಣಿಗೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Advertisement

Advertisement

ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ನ್ಯಾಯಾಂಗ ತನಿಖೆಗೆ ವಹಿಸಿದ್ದರು. ಆದರೆ ವಿಪಕ್ಷಗಳು ಜಾರ್ಜ್ ರಾಜಿನಾಮೆಗೆ ಪಟ್ಟು ಹಿಡಿದು ಸದನದ ಒಳಗೂ, ಹೊರಗೂ ಪ್ರತಿಭಟನೆ ನಡೆಸುತ್ತಿವೆ. ಆದರೆ ಸಿಎಂ ಜಾರ್ಜ್ ರಕ್ಷಣೆಗೆ ನಿಲ್ಲುವ ಮೂಲಕ ಪ್ರಕರಣ ಮತ್ತಷ್ಟು ಜಟಿಲವಾಗತೊಡಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments