ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಗಣಪತಿ ಆತ್ಮಹತ್ಯೆ ಪ್ರಕರಣ; ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ; ಸಿಎಂ

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ...

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಹಿರಿಯ ಅಧಿಕಾರಿಗಳಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ವರದಿಯಲ್ಲಿ ಆತ್ಮಹತ್ಯೆಗೂ ಮುನ್ನ ಗಣಪತಿ ಹೇಳಿದ್ದು ಸತ್ಯ ಎಂಬ ಮಾಹಿತಿ ಇರುವುದಾಗಿ ಟಿವಿ ಮಾಧ್ಯಮವೊಂದು ವರದಿ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಿಐಡಿ ವರದಿ ಇನ್ನೂ ನನ್ನ ಕೈಸೇರಿಲ್ಲ ಎಂದರು.
ಸಿಐಡಿ ಪ್ರಾಥಮಿಕ ವರದಿ ಇನ್ನೂ ನನ್ನ ಕೈಸೇರಿಲ್ಲ.  ತನಿಖೆ ನಡೆಯುತ್ತಿದೆ. ಈ ಸಮಯದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸಿಎಂ ಹೇಳಿದರು. ಅಲ್ಲದೆ ಸಿಐಡಿ ವರದಿ ಸೋರಿಕೆ ಸಹ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!