ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಟರ್ಕಿಯಲ್ಲಿ ಸಿಲುಕಿದ ಕರ್ನಾಟಕದ ಕುಸ್ತಿ ಪಟು ಅರ್ಜನ್ ಸುರಕ್ಷಿತ

ಟರ್ಕಿಯ ಸೇನಾ ದಂಗೆಯಲ್ಲಿ ಸಿಲುಕಿದ್ದ ಕರ್ನಾಟಕದ ಅಂತರಾಷ್ಟ್ರೀಯ ಕುಸ್ತಿ ಪಟು ಅರ್ಜುನ್ ಅವರು ಸುರಕ್ಷಿತವಾಗಿದ್ದಾರೆ.

ಸೇನಾ ದಂಗೆಯ ಚಿತ್ರ
Lingaraj Badiger
Updated On : 16 Jul 2016, 1:34 am
ಬೆಂಗಳೂರು: ಟರ್ಕಿಯ ಸೇನಾ ದಂಗೆಯಲ್ಲಿ ಸಿಲುಕಿದ್ದ ಕರ್ನಾಟಕದ ಅಂತರಾಷ್ಟ್ರೀಯ ಕುಸ್ತಿ ಪಟು ಅರ್ಜುನ್ ಅವರು ಸುರಕ್ಷಿತವಾಗಿದ್ದಾರೆ.
ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಬಾಗಲಕೋಟೆ ಮೂಲದ ಅರ್ಜುನ್ ಅವರು ಟರ್ಕಿಯಿಂದ ಇಂದು ಭಾರತಕ್ಕೆ ವಾಪಸ್ ಆಗಬೇಕಿತ್ತು. ಆದರೆ ಟರ್ಕಿಯಲ್ಲಿ ಸೇನಾ ಪಡೆಗಳು ಕ್ಷಿಪ್ರಕಾಂತಿ ನಡೆಸಿದ ಪರಿಣಾಮ ಅವರು ಸದ್ಯಕ್ಕೆ ಟರ್ಕಿಯಲ್ಲೇ ಉಳಿದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ದಾವಣಗೆರೆಯಲ್ಲಿರುವ ಅರ್ಜುನ್ ಅವರ ಕೋಚ್ ಶಿವಾನಂದ್ ಅವರು, ನಾನು ಅರ್ಜನ್ ನೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಸುರಕ್ಷಿತವಾಗಿದ್ದಾರೆ ಮತ್ತು ಪರಿಸ್ಥಿತ ಸಹಜ ಸ್ಥಿತಿಗೆ ಮರಳಿದ ನಂತರ ದೇಶಕ್ಕೆ ಆಗಮಿಸುತ್ತಾರೆ ಎಂದು ಹೇಳಿದ್ದಾರೆ.

Advertisement

Advertisement

ಟರ್ಕಿಯಲ್ಲಿರುವ 57 ಭಾರತೀಯ ಕ್ರೀಡಾಪಟುಗಳು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments