ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸೋಮವಾರವೂ ಪ್ರತಿಭಟನೆ ಮುಂದೂವರೆಸಿದಗ್ದು, ಪ್ರತಿಪಕ್ಷಗಳ ತೀವ್ರ ಗದ್ದಲ, ಕೋಲಾಹಲದ ನಡುವೆಯೇ ಧನವಿನಿಯೋಗ ವಿಧೇಯಕ ಹಾಗೂ ಕರ್ನಾಟಕ ನಗರಾಭಿವೃದ್ಧಿ ತಿದ್ದುಪಡಿ ವಿಧೇಯಕ ಸೇರಿದಂತೆ ಹಲವು ವಿಧೇಯಕವನ್ನು ಅಂಗೀಕರಿಸಲಾಗಿದೆ.
ಇಂದು ಬೆಳಗ್ಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ, ಜೆಡಿಎಸ್ ಸದಸ್ಯರು ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದವು. ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು 30 ನಿಮಿಷಗಳ ಕಾಲ ಮುಂದೂಡಿದರು.
ಬಳಿಕ ಕಲಾಪ ಆರಂಭಗೊಂಡಾಗಲೂ ವಿಪಕ್ಷಗಳ ವಿಧಾನಸಭೆಯ ಬಾವಿಗಿಳಿದು ಜಾರ್ಜ್ ರಾಜಿನಾಮೆಗೆ ಆಗ್ರಹಿಸಿದವು. ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಸಿಎಂ, ವಿಪಕ್ಷಗಳಿಗೆ ಕಾರ್ಯಾಂಗ, ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲ ಎಂದರು. ಈ ರೀತಿಯ ಪ್ರತಿಭಟನೆಯಿಂದ ಪ್ರಯೋಜನೆ ಆಗುವುದಿಲ್ಲ. ಪ್ರತಿಪಕ್ಷಗಳಿಗೆ ರಾಜ್ಯದ ಹಿತಾಸಕ್ತಿ ಮುಖ್ಯವಲ್ಲ, ಬರೇ ರಾಜಕಾರಣ, ಪ್ರಚಾರವಷ್ಟೇ ಮುಖ್ಯ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಒಬ್ಬ ವ್ಯಕ್ತಿ ಸಲುವಾಗಿ ಇಡೀ ಸದನವನ್ನು ಹಾಳು ಮಾಡುವ ಸರ್ಕಾರ ಇದು ಆಕ್ರೋಶ ವ್ಯಕ್ತಪಡಿಸಿದರು. ಜಾರ್ಜ್ ರಕ್ಷಣೆ ಮಾಡುವ ಮುಖ್ಯಮಂತ್ರಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಗದ್ದಲ, ಕೋಲಾಹಲದ ನಡುವೆ ವಿಧಾನಸಭೆಯಲ್ಲಿ ಧನವಿನಿಯೋಗ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿ, ವಿಧೇಯಕಕ್ಕೆ ಒಪ್ಪಿಗೆ ಪಡೆದ ನಂತರ ಕಲಾಪವನ್ನು ಸಂಜೆ 4ಗಂಟೆಗೆ ಮುಂದೂಡಲಾಯಿತು.
ಇನ್ನು ವಿಧಾನ ಪರಿಷತ್ ನಲ್ಲೂ ತನಿಖೆಯೇ ಆಗದೆ ರಾಜಿನಾಮೆ ನೀಡಿ ಎಂದು ಕೇಳುವುದು ಎಷ್ಟು ಸರಿ. ಪ್ರಜಾಪ್ರಭುತ್ವದಲ್ಲಿ ಯಾರೂ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾನಾಯಕ, ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲು ಮುಂದಾದಾಗ ವಿಪಕ್ಷಗಳು ಅಡ್ಡಿಪಡಿಸಿದ ಘಟನೆ ನಡೆಯಿತು. ಬಳಿಕ ಗದ್ದಲದ ನಡುವೆಯೇ . ಸದನ ಸಮಿತಿಗಳ ವರದಿ ಮಂಡನೆಯಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics