ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ: ಕೇಜ್ರಿವಾಲ್

ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ಧು ಅವರ ನಡೆಗೆ ಸೆಲ್ಯೂಟ್ ಹೊಡೆದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ

ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ಧು ಅವರ ನಡೆಗೆ ಸೆಲ್ಯೂಟ್ ಹೊಡೆದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ತಾಂಡವವಾಡುತ್ತಿದ್ದು, ಪ್ರಾಮಾಣಿಕರಿಗೆ ಉನ್ನತ ನಾಯಕತ್ವ ಉಸಿರು ಕಟ್ಟುವ ವಾತಾವರಣ ಸೃಷ್ಟಿಸಿದೆ ಎಂದು ಮಂಗಳವಾರ ಹೇಳಿದ್ದಾರೆ. 
"ಹಿರಿಯ ನಾಯಕರ ಸರ್ವಾಧಿಕಾರಿ ಧೋರಣೆಯಿಂದ ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕ ಮತ್ತು ಒಳ್ಳೆಯ ಜನರು ಉಸಿರುಗಟ್ಟಿದ್ದಾರೆ" ಎಂದು ದೆಹಲಿಯ ಆಡಳಿತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 
ಮುಂದಿನ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಿದ್ಧು ಭಾರತೀಯ ಜನತಾ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗಿವೆ. 
ಸಿದ್ಧು ಇನ್ನೆರಡು ದಿನಗಳಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಅವರ ಮುಂದಿನ ರಾಜಕೀಯ ನಡೆ ಘೋಷಿಸಲಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಎಎಪಿ ನಾಯಕರೊಬ್ಬರು ಹೇಳಿದ್ದಾರೆ. 
ಈ ವರ್ಷ ಏಪ್ರಿಲ್ ನಲ್ಲಿ ನವಜೋತ್ ಸಿಂಗ್ ಸಿದ್ಧು ಅವರನ್ನು ಬಿಜೆಪಿ ರಾಜ್ಯಸಭೆಗೆ ನಾಮಕರಣ ಮಾಡಿತ್ತು. ಸೋಮವಾರ ಸದಸ್ಯತ್ವಕ್ಕೆ ಸಿದ್ದು ರಾಜೀನಾಮೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ