ಬಂಗಾಳಕೊಲ್ಲಿಯಲ್ಲಿ ವಿಮಾನ ನಾಪತ್ತೆ 
ಪ್ರಧಾನ ಸುದ್ದಿ

29 ಮಂದಿ ಪ್ರಯಾಣಿಸುತ್ತಿದ್ದ ಸೇನಾ ವಿಮಾನ ನಾಪತ್ತೆ: ಬಂಗಾಳಕೊಲ್ಲಿಯಲ್ಲಿ ಪತನ ಶಂಕೆ

4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಕರಿದ್ದ ಭಾರತೀಯ ವಾಯುಸೇನೆಯ ಎಎನ್-32 ಸಂಖ್ಯೆ ವಿಮಾನ ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಪತನವಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಚೆನ್ನೈ: 4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಕರಿದ್ದ ಭಾರತೀಯ ವಾಯುಸೇನೆಯ ಎಎನ್-32 ಸಂಖ್ಯೆ ವಿಮಾನ ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿದ್ದು,  ಸಮುದ್ರದಲ್ಲಿ ಪತನವಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಬೆಳಗ್ಗೆ ಸುಮಾರು 7.30ರಲ್ಲಿ ಚೆನ್ನೈನ ತಾಂಬರಮ್‌ ಏರ್‌ಬೇಸ್‌ನಿಂದ 29 ಮಂದಿಯನ್ನು ಹೊತ್ತು ಅಂಡಮಾನ್‌ ನಿಕೋಬಾರ್‌ನ ಪೋರ್ಟ್‌ ಬ್ಲೇರ್‌ನತ್ತ ಟೇಕ್ ಆಫ್ ಆಗಿದ್ದ ಎಎನ್-32 ವಿಮಾನ  8.12ರ ಹೊತ್ತಿಗೆ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬೆಳಗ್ಗೆ 7.30ರಲ್ಲಿ ಟೇಕ್ ಆಫ್ ಆಗಿದ್ದ ವಿಮಾನ ಚೆನ್ನೈನಲ್ಲಿರುವ ನಿಯಂತ್ರಣ ಕೊಠಡಿಯನ್ನು 2 ಬಾರಿ  ಸಂಪರ್ಕಿಸಿತ್ತು. ಬೆಳಗ್ಗೆ 7.46ರಲ್ಲಿ ನಿಯಂತ್ರಣ ಕೊಠಡಿಯ ಸಂಪರ್ಕಿಸಿದ್ದ ವಿಮಾನದ ಸಂಪರ್ಕ ಕಡಿತಗೊಂಡು ಮತ್ತೆ ಸುಮಾರು ಅರ್ಧ ಗಂಟೆ ಬಳಿಕ 8.12ರಲ್ಲಿ ಕೊನೆಯ ಬಾರಿಗೆ ಸಂಪರ್ಕಕ್ಕೆ  ಬಂದಿತ್ತು. ವಿಮಾನದಲ್ಲಿ ನಾಲ್ಕು ಗಂಟೆಗೆ ಸಾಕಾಗುವಷ್ಟು ಇಂಧನವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಬಳಿಕ ವಿಮಾನವನ್ನು ಸಂಪರ್ಕಿಸಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲ್ಲಿಲ್ಲ. ಹೀಗಾಗಿ ಸೇನಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲಾಗಿದ್ದು, ವಿಮಾನ ಬೆರೆಲ್ಲೂ ಇಳಿದಿರುವ ಕುರಿತು  ಸಮಾಚಾರ ತಿಳಿದಿಲ್ಲ. ಈ ಮಾಹಿತಿಯಾಧಾರದ ಮೇಲೆ ವಿಮಾನ ಪತನವಾಗಿರಬಹುದು ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ವಿಮಾನ ಕೊನೆಯ ಬಾರಿಗೆ ನಿಯಂತ್ರಣ ಕೊಠಡಿಯ ಸಂಪರ್ಕಕ್ಕೆ  ಬಂದಾಗ ಬಂಗಾಳ ಕೊಲ್ಲಿಯ ಮೇಲೆ ಹಾರಾಟ ಮಾಡುತ್ತಿತ್ತು. ಈ ಹಿನ್ನಲೆಯಲ್ಲಿ ವಿಮಾನ ಬಂಗಾಳಕೊಲ್ಲಿಯಲ್ಲೇ ಬಿದ್ದಿರಬಹುದು ಎಂಬ ಶಂಕೆಯ ಮೇರೆಗೆ ಸೇನಾ ವಿಮಾನಗಳು  ಬಂಗಾಳಕೊಲ್ಲಿಯಲ್ಲಿ ಶೋಧ ಕಾರ್ಯ ಆರಂಭಿಸಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT