ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಭಯ ದೇಶಗಳ ಜಂಟೀ ಗಸ್ತಿಗೆ ಚಾಲನೆ (ಪಿಟಿಐ ಚಿತ್ರ) 
ಪ್ರಧಾನ ಸುದ್ದಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್-ಚೀನಾ ಜಂಟೀ ಗಸ್ತು; ಭಾರತದಿಂದ ಎಚ್ಚರಿಕೆ ನಡೆ

ಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಮತ್ತು ಚೀನಾ ಸೇನೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಜಂಟಿ ಗಸ್ತು ಆರಂಭಿಸಿವೆ...

ಬೀಜಿಂಗ್: ಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಮತ್ತು ಚೀನಾ ಸೇನೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಜಂಟಿ ಗಸ್ತು ಆರಂಭಿಸಿವೆ.

ಭಾರತದ ವಿರೋಧದ ನಡುವೆಯೂ ಇದೇ ಮೊದಲ ಬಾರಿಗೆ ಪಾಕಿಸ್ತಾನ ಮತ್ತು ಚೀನಾ ಸೈನಿಕರು ವಿವಾದಿತ ಪಿಒಕೆಯಲ್ಲಿ ಜಂಟೀ ಗಸ್ತು ಕಾರ್ಯ ಆರಂಭಿಸಿದ್ದು, ಪಿಒಕೆ ಮಾತ್ರವಲ್ಲದೇ ಚೀನಾದ  ಕ್ಸಿನ್‌ಜಿಯಾಂಗ್ ಪ್ರದೇಶದ ಗಡಿಯಲ್ಲಿ ಎರಡೂ ದೇಶಗಳ ಪಡೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿದುಬಂದಿದೆ.

ಈ ಪ್ರದೇಶದಲ್ಲಿ ಹೆಚ್ಚಿರುವ ಉಯ್ಫರ್ ಉಗ್ರರ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಕಿಸ್ತಾನಕ್ಕೆ ಸಾಥ್ ನೀಡುತ್ತಿರುವುದಾಗಿ ಚೀನಾ ಸರ್ಕಾರ ಹೇಳಿಕೊಂಡಿದ್ದರೂ, ಚೀನಾ ನಡೆಯನ್ನು  ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಹೆಸರಲ್ಲಿ ಚೀನಾ ಪರೋಕ್ಷವಾಗಿ ಭಾರತಕ್ಕೆ ಟಾಂಗ್ ಕೊಡಲು ಮುಂದಾಗಿದ್ದು, ಇದೇ ಕಾರಣಕ್ಕೆ ಪಾಕಿಸ್ತಾನದೊಂದಿಗೆ  ಕೈಜೊಡಿಸಿದೆ ಎಂದು ಹೇಳಲಾಗುತ್ತಿದೆ.

ಇನ್ನು ಈ ಹಿಂದೆ ಈ ಪ್ರದೇಶದಲ್ಲಿ ಹೆಚ್ಚಿರುವ ಉಯ್ಫರ್ ಉಗ್ರರ ಚಟುವಟಿಕೆ ನಿಯಂತ್ರಿಸಲು ಚೀನಾದೊಂದಿಗೆ ಕೈಜೊಡಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಅಲ್ಲದೆ ಈ ಉಗ್ರ ಸಂಘಟನೆಯ  100ಕ್ಕೂ ಹೆಚ್ಚು ಜನರು ಐಸಿಸ್ ಉಗ್ರ ಸಂಘಟನೆ ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!