ಬೆಂಗಳೂರು: ಬೆಲ್ಜಿಯಂ ಪ್ರವಾಸದಲ್ಲಿರುವ ತಮ್ಮ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ ಬೆಲ್ಜಿಯಂಗೆ ತೆರಳುತ್ತಿದ್ದಾರೆ.
ತಮ್ಮ ಪುತ್ರನ ಅನಾರೋಗ್ಯದ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ, ನನ್ನ ಮಗನ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಆದರೆ ಸದ್ಯ ಏನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 4.30ಕ್ಕೆ ನಾನು ಬೆಲ್ಜಿಯಂಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಬೆಲ್ಜಿಯಂ ಪ್ರವಾಸದಲ್ಲಿರುವ ರಾಕೇಶ್ ಪ್ಯಾಂಕ್ರಿಯಾಸ್ (ಮೆದೋಜೀರಕ ಗ್ರಂಥಿ) ತೊಂದರೆಯಿಂದ ಬಳಲುತ್ತಿದ್ದು, ಬೆಲ್ಜಿಯಂನ ಬ್ರಷಲ್ಸ್ ನ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಮೆರಿಕ ಅಥವಾ ಸಿಂಗಾಪುರದಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಸಿಎಂ ಕುಟುಂಬ ಮುಂದಾಗಿದೆ. ಆದರೆ, ರಾಕೇಶ್ ಅವರ ಅನಾರೋಗ್ಯ ಉಲ್ಬಣವಾಗಲು ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics