ವಿಜಯ ಕಾಂತ್ 
ಪ್ರಧಾನ ಸುದ್ದಿ

ಮಾನನಷ್ಟ ಮೊಕದ್ದಮೆಗಳಿಂದ ವಿಜಯ ಕಾಂತ್ ಗೆ ಸಂಕಷ್ಟ

ಡಿಎಂ ಡಿಕೆ ಮುಖ್ಯಸ್ಥ ವಿಜಯ್ ಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಗೆ ಮಾನನಷ್ಟ ಮೊಕದ್ದಮೆಯಿಂದಾಗಿ ಸಂಕಷ್ಟ ಎದುರಾಗಿದೆ...

ತ್ರಿಪುರ್: ಡಿಎಂ ಡಿಕೆ ಮುಖ್ಯಸ್ಥ ವಿಜಯ್ ಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಗೆ ಮಾನನಷ್ಟ ಮೊಕದ್ದಮೆಯಿಂದಾಗಿ ಸಂಕಷ್ಟ ಎದುರಾಗಿದೆ.

ನವೆಂಬರ್ 2015 ರಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇಲೆ ಫೆಬ್ರವರಿ 29 ರಂದು ವಿಜಯ ಕಾಂತ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

ಈ ಸಂಬಂಧ ಕೋರ್ಟ್ ಗೆ ಹಾಜರಾಗುವಂತೆ ಸ್ಥಳೀಯ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೆ ದಂಪತಿ ಯಾವ ನೋಟಿಸ್ ಗೂ ಉತ್ತರಿಸಿರಲಿಲ್ಲ, ಇದರಿಂದ ಅಸಮಾಧಾನ ಗೊಂಡಿರುವ ನ್ಯಾಯಾಲಯ ದಂಪತಿ ವಿರುದ್ಧ ವಾರೆಂಟ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಅಲಮೇಲು ನಟರಾಜನ್ ದಂಪತಿ ವಿರುದ್ಧ ವಾರೆಂಟ್ ಜಾರಿಗೊಳಿಸಿ ಆಗಸ್ಚ್ 8 ಕ್ಕೆ ವಿಚಾರಣೆ ಮುಂದೂಡಿದ್ದಾರೆ.

ಇನ್ನು ವಿಜಯ್ ಕಾಂತ್ ಪತ್ನಿ ಪ್ರೇಮಲತಾ ಅವರ ವಿರುದ್ಧ ಇದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಅವರು ಸ್ಥಳೀಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT