ಲಕ್ಷಿಕಾಂತ್ ಪರ್ಸೆಕರ್ 
ಪ್ರಧಾನ ಸುದ್ದಿ

'ಬಿಗ್ ಬ್ರದರ್' ಕರ್ನಾಟಕ ಹಿಂಸೆ ನಿಲ್ಲಿಸಿ, ಮಹದಾಯಿ ತೀರ್ಪ ಒಪ್ಪಿಕೊಳ್ಳಿ: ಗೋವಾ

ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ...

ಪಣಜಿ: ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ರಾಜ್ಯಕ್ಕೆ ಆಗಮಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಮತ್ತೆ ಎರಡು ದಿನಗಳ ಕಾಲ ಸ್ಥಗಿತಗೊಳಿಸಿದೆ.
ಬಿಗ್ ಬ್ರದರ್ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಿ. ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ಒಪ್ಪಿಕೊಳ್ಳಿ ಎಂದು ಗೋವಾ ಮುಖ್ಯಮಂತ್ರಿ ಲಕ್ಷಿಕಾಂತ್ ಪರ್ಸೆಕರ್ ಅವರು ಹೇಳಿದ್ದಾರೆ.
ನಾವು ಕರ್ನಾಟಕಕ್ಕೆ ಸಂಚರಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಭಯದಿಂದ ಅಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಸೆಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಗೋವಾ ಚಿಕ್ಕ ಸಹೋದರನಿದ್ದಂತೆ. ಕರ್ನಾಟಕ ನಮಗೆ ಹಿರಿಯ ಸಹೋದರ. ಹೀಗಾಗಿ ಈ ಚಿಕ್ಕ ಸಹೋದರನ ಭಾವನೆಗಳನ್ನು ಕರ್ನಾಟಕ ಅರ್ಥ ಮಾಡಿಕೊಳ್ಳಬೇಕು ಎಂದು ಗೋವಾ ಸಿಎಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT