ಕರ್ನಾಟಕ ಬಂದ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮಹದಾಯಿ ತೀರ್ಪು ವಿರೋಧಿಸಿ ಬಂದ್; ಕರ್ನಾಟಕ ಸ್ಥಬ್ದ

ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ  ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಪ್ರಮುಖವಾಗಿ ರಾಜಧಾನಿ ಬೆಂಗಳೂರು, ಮೈಸೂರು, ಬೆಳಗಾವಿ, ಅವಳಿ ನಗರಗಳಾದ ಹುಬ್ಬಳಿ-ಧಾರವಾಡ ಸೇರಿದಂತೆ ಪ್ರಮುಖ ನಗರಗಳಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದ್ದು, ಸಂಪೂರ್ಣ  ಸ್ಥಬ್ಧವಾಗಿದೆ. ಸರ್ಕಾರಿ ಸಾರಿಗೆ ನೌಕರರು ಕೂಡ ಬಂದ್ ಗೆ ಬೆಂಬಲ ನೀಡಿದ್ದು, ಸರ್ಕಾರಿ ಬಸ್ ಸೇವೆಗಳು ಸ್ಥಗಿತಗೊಂಡಿವೆ. ಇದಲ್ಲದೆ ಆಟೋ ಸೇವೆಗಳು, ಟ್ಯಾಕ್ಸಿ, ಕ್ಯಾಬ್ ಸೇವೆಯನ್ನು  ನಿಲ್ಲಿಸಲಾಗಿದೆ.

ಧಾರವಾಡದಲ್ಲಿ ನಡೆಯುತ್ತಿರುವ ಬಂದ್ ಗೆ ಕನ್ನಡಪರ ಸಂಘಟನೆಗಳ ಮಹಿಳಾ ಕಾರ್ಯಕರ್ತರು ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿ ತಡೆ ನಡೆಸುವ ಮೂಲಕ ತಮ್ಮ  ಪ್ರತಿಭಟನೆ ವ್ಯಕ್ತಪಡಿಸಿದರು. ಇನ್ನು ಚಾಮರಾಜನಗರದಲ್ಲಿಯೂ ಕೂಡ ಬಂದ್ ಆಚರಣೆ ಮಾಡಲಾಗುತ್ತಿದ್ದು, ಬಂದ್ ಪರಿಣಾಮ ಯಾವುದೇ ಸರ್ಕಾರಿ ಬಸ್ ಗಳು ರಸ್ತೆಗಿಳಿದಿಲ್ಲ. ಇನ್ನು  ಶಾಲಾ-ಕಾಲೇಜುಗಳಿಗೆ ರಜೆ ನೀಡದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ತೀವ್ರ ಪರದಾಡುತ್ತಿದ್ದಾರೆ. ಬಂದ್ ಘೋಷಣೆಯಾಗಿದ್ದರೂ ರಜೆ ಬಗ್ಗೆ ಚಾಮರಾಜನಗ  ಜಿಲ್ಲಾಧಿಕಾರಿಗಳಾದ ಬಿರಾಮು ಅವರು ಈವರೆಗೂ ಮಾಹಿತಿ ನೀಡಿಲ್ಲ. ಆಲ್ಲದೆ ಈ ಬಗ್ಗೆ ಪೋಷಕರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೆ ಕರೆ ಕೂಡ ಸ್ವೀಕರಿಸುತ್ತಿಲ್ಲ. ಈ ಹಿನ್ನಲೆಯಲ್ಲಿ  ಪೋಷಕರು ಜಿಲ್ಲಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲೂ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಖಾಸಗಿ ಬಸ್ ಸೇವೆ ಹಾಗೂ ಸರ್ಕಾರಿ ಬಸ್ ಸೇವೆಗಳು ಸ್ಥಗಿತಗೊಂಡಿವೆ. ಸಕ್ಕರೆ ನಾಡು ಮಂಡ್ಯದಲ್ಲೂ ಬಂದ್  ನಡೆಸಲಾಗುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರು-ಮಂಡ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ವ್ಯಾಪಕ ಪ್ರತಿಭಟನೆ
ಇನ್ನು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ವೇಳೆ ಹಿಂಸಾಚಾರ ನಡೆಯುವ ಭೀತಿ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತುರ್ತು ಪ್ರಹಾರ  ದಳ , ಗೃಹ ರಕ್ಷಕ ದಳ, ಅಶ್ರುವಾಯು ದಾಳಿ, ಜಲಫಿರಂಗಿ ದಳಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಅಲ್ಲದೆ ಅಗತ್ಯ ಬಿದ್ದರೆ ಅರೆ ಸೇನಾ ಪಡೆಗಳನ್ನು ಕೂಡ ಬಳಿಸಿಕೊಳ್ಳುವುದಾಗಿ ಗೃಹ  ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT