ಜಿ.ಟಿ.ದೇವೇಗೌಡ, ಮಲ್ಲಕಾರ್ಜುನ್ ಖೂಬಾ, ವರ್ತೂರ್ ಪ್ರಕಾಶ್, ಬಿ.ಆರ್.ಪಾಟೀಲ್ 
ಪ್ರಧಾನ ಸುದ್ದಿ

ರಾಜ್ಯಸಭೆ ಚುನಾವಣೆ: 1 ಮತಕ್ಕೆ 5 ಕೋಟಿ ಡಿಮಾಂಡ್, ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ ರಾಜ್ಯದ ಶಾಸಕರು

ರಾಜ್ಯಸಭೆ ಚುನಾವಣೆಗೆ ಭರ್ಜರಿ ಕುದುರೆ ವ್ಯಾಪಾರ ನಡೆಯುತ್ತಿದ್ದು, ಕರ್ನಾಟಕದ ಶಾಸಕರು ತಮ್ಮ ಮತವನ್ನು ಮಾರಾಟಕ್ಕಿಟ್ಟಿರುವುದು ರಾಷ್ಟ್ರೀಯ...

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಭರ್ಜರಿ ಕುದುರೆ ವ್ಯಾಪಾರ ನಡೆಯುತ್ತಿದ್ದು, ಕರ್ನಾಟಕದ ಶಾಸಕರು ತಮ್ಮ ಮತವನ್ನು ಮಾರಾಟಕ್ಕಿಟ್ಟಿರುವುದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಬಹಿರಂಗವಾಗಿದೆ.
ಇಂಡಿಯಾ ಟುಡೇ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ನಾಲ್ವರು ಶಾಸಕರು ರಾಜ್ಯಸಭೆಯ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ತಲಾ ಐದು ಕೋಟಿ ರುಪಾಯಿ ಡಿಮಾಂಡ್ ಮಾಡಿದ್ದಾರೆ.
ಕುಟುಕು ಕಾರ್ಯಾಚರಣೆಯಲ್ಲಿ ಕೋಲಾರ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್, ಆಳಂದ್ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಬಸವಕಲ್ಯಾಣ ಜೆಡಿಎಸ್ ಶಾಸಕ ಮಲ್ಲಕಾರ್ಜುನ್ ಖೂಬಾ ಮತ ಹಾಕಲು ಐದು ಕೋಟಿ ರುಪಾಯಿ ಕೇಳುತ್ತಿರುವ ದೃಶ್ಯ ಸೆರೆಯಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವರ್ತೂರ್ ಪ್ರಕಾಶ್, ಸ್ಟಿಂಗ್ ಆಪರೇಷನ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್ ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT