ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಶಾಸಕರಿಂದ ಮತಕ್ಕಾಗಿ ಲಂಚ ಸ್ಟಿಂಗ್: ವರದಿ ಕೇಳಿದ ಕೇಂದ್ರ ಚುನಾವಣಾ ಆಯೋಗ

ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತ...

ನವದೆಹಲಿ4: ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ಹಣದ ಬೇಡಿಕೆಯಿಟ್ಟಿರುವ ಬಗ್ಗೆ ವರದಿ ನೀಡುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಶಾಸಕರ ವಿರುದ್ಧದ ಸ್ಟಿಂಗ್ ಆಪರೇಷನ್ ಬಹಿರಂಗವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕೇಂದ್ರ ಚುನಾವಣಾ ಆಯೋಗ ಇಂದು ಮುಖ್ಯ ಚುನಾವಣಾ ಆಯುಕ್ತ ಡಾ.ನಸಿಮ್ ಜೈದಿ ನೇತೃತ್ವದಲ್ಲಿ ಸಭೆ ನಡೆಸಿತ್ತು. ಸಭೆಯ ಬಳಿಕ ಜೈದಿ ಅವರು ಕುಟುಕು ಕಾರ್ಯಾಚರಣೆ ಬಗ್ಗೆ ವರದಿ ನೀಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಅನಿಲ್‌ಕುಮಾರ್ ಕುಮಾರ್ ಝಾ ಸೂಚಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗ ನೀಡುವ ವರದಿ ಆಧಾರದ ಮೇಲೆ ರಾಜ್ಯಸಭೆ ಚುನಾವಣೆ ಭವಿಷ್ಯ ನಿಂತಿದೆ. ಒಂದು ವೇಳೆ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗಗೊಂಡಿರುವಂತೆ ಶಾಸಕರು ಮತ ಹಾಕಲು ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಸಾಬೀತಾದರೆ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ.
ಇದಕ್ಕೂ ಮುನ್ನ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಜಾ ಅವರು, ಮತಕ್ಕಾಗಿ ಲಂಚ ಸ್ಟಿಂಗ್ ಆಪರೇಷನ್ ಅನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಕಾರ್ಯಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ವಾಹಿನಿಗೆ ಸೂಚಿಸಲಾಗಿದೆ ಎಂದು ಹೇಳಿದ್ದರು.
ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ಆರು ಮಂದಿ ಶಾಸಕರು ಹಾಗೂ ಇಬ್ಬರು ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳು ನೋಟಿಗಾಗಿ ವೋಟು ಡೀಲ್ ಕುದುರಿಸಿರುವುದು ಬಹಿರಂಗಗೊಂಡಿದೆ.
ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್, ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!