ಅನುಪಮಾ ಶೆಣೈ 
ಪ್ರಧಾನ ಸುದ್ದಿ

ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ರಾಜಿನಾಮೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ...

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಶೆಣೈ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಸಿಬ್ಬಂದಿ ಮೂಲಕ ರಾಜಿನಾಮೆ ಪತ್ರ ರವಾನಿಸಿದ್ದಾರೆ ಎಂದು ಹೇಳಿದ್ದಾರೆ. 
ಶೆಣೈ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಅವರ ರಾಜಿನಾಮೆ ಪತ್ರವನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಚೇತನ್ ಅವರು ತಿಳಿಸಿದ್ದಾರೆ.
ಪರಮೇಶ್ವರ್ ನಾಯ್ಕ್ ಅವರು ಕ್ಷುಲ್ಲಕ ಕಾರಣಕ್ಕೆ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಯ ಡಿವೈಎಸ್ ಪಿಯಾಗಿ ವರ್ಗಾವಣೆ ಮಾಡಿಸಿದ್ದರು. ಆದರೆ ಇದಕ್ಕೆ ಪ್ರತಿಪಕ್ಷ ಹಾಗೂ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ವರ್ಗಾವಣೆಯನ್ನು ಸರ್ಕಾರ ರದ್ದು ಮಾಡಿತ್ತು.
ರಾಜಿನಾಮೆಗೆ ಕಾರಣ ಏನು?
ಕೂಡ್ಲಿಗಿಯ ಅಂಬೇಡ್ಕರ್‌ ಭವನದ ಬಳಿ ಪ್ರಭಾವಿ ಕಾಂಗ್ರೆಸ್‌ ಮುಖಂಡರೊಬ್ಬರು ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡುತ್ತಿದ್ದರು.ಇದರ ವಿರುದ್ದ ದಲಿತ ಸಂಘಟನೆಗಳು ಅನುಪಮಾ ಅವರಿಗೆ ದೂರು ನೀಡಿದ್ದರು . ಹೀಗಾಗಿ ಅಲ್ಲಿ ಕಾಮಗಾಗಿ ನಡೆಸದಂತೆ ಅನುಪಮಾ ಖಡಕ್‌ ಸೂಚನೆ ನೀಡಿದ್ದರು ಎನ್ನಲಾಗಿದೆ.

ಸೂಚನೆ ಮೇಲೆಯೂ ಕಾಮಗಾರಿ ಮುಂದುವರಿಸಿದ ಕಾರಣ ಮೂವರನ್ನು ಅನುಪಮಾ ಬಂಧಿಸಿದ್ದರು. ಬಂಧನದ ಬಳಿಕ ಕಾಂಗ್ರೆಸ್‌ ಮುಖಂಡನ ಬೆಂಬಲಿಗರು ಠಾಣೆಯ ಮುಂದೆ ಅನುಪಮಾ ಅವರ ವಿರುದ್ದ ಪ್ರತಿಭಟನೆಯನ್ನೂ ನಡೆಸಿದ್ದರು. ಹೀಗಾಗಿ ಮನನೊಂದು ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ