ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ 
ಪ್ರಧಾನ ಸುದ್ದಿ

ಮೆಟ್ರೋ ರೈಲು ವಿಸ್ತರಣೆಗೆ ಒಪ್ಪಿಗೆ; ಮೋದಿಗೆ ಧನ್ಯವಾದ ಹೇಳಿದ ಜಯಲಲಿತಾ

ತಮಿಳುನಾಡು ರಾಜಧಾನಿಯ ಮೆಟ್ರೋ ಸೇವೆ ವಿಸ್ತರಣೆಗೆ ಕೇಂದ್ರ ಸಂಪುಟ ಅಸ್ತು ಎಂದಿರುವುದಕ್ಕೆ ಮುಖ್ಯಮಂತ್ರಿ ಜೆ ಜಯಲಲಿತಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಚೆನ್ನೈ: ತಮಿಳುನಾಡು ರಾಜಧಾನಿಯ ಮೆಟ್ರೋ ಸೇವೆ ವಿಸ್ತರಣೆಗೆ ಕೇಂದ್ರ ಸಂಪುಟ ಅಸ್ತು ಎಂದಿರುವುದಕ್ಕೆ ಮುಖ್ಯಮಂತ್ರಿ ಜೆ ಜಯಲಲಿತಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಮೋದಿಯವರಿಗೆ ಬರೆದ ಪತ್ರದಲ್ಲಿ "ಮೊದಲನೇ ಹಂತದ ಕಾರಿಡಾರ್೧ ಮೆಟ್ರೋ ರೈಲು ಸೇವೆ ಯೋಜನೆಯನ್ನು ೩೩೭೦ ಕೋಟಿ ವೆಚ್ಚದಲ್ಲಿ  ೯.೫೨ ಕಿಲೋ ಮೀಟರ್ ವಿಸ್ತರಣೆ ಮಾಡಲು ಸಂಪುಟ ಸಭೆ ಒಪ್ಪಿಕೊಂಡಿರುವುದು ತಿಳಿದುಬಂದಿದೆ.

"ತಮಿಳುನಾಡು ಸರ್ಕಾರ ಮತ್ತು ಚೆನ್ನೈ ಜನತೆಯ ಪರವಾಗಿ ಈ ವಿಸ್ತರಣೆಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ" ಎಂದು ಅವರು ಹೇಳಿದ್ದಾರೆ.

ಅಲ್ಲದೆ ಏಪ್ರಿಲ್ ನಿಂದ ಜೂನ್ ವರೆಗೆ ಮೂರು ತಿಂಗಳ ಕಾಲ ತಮಿಳುನಾಡಿಗೆ ಆಹಾರ ಧಾನ್ಯಗಳನ್ನು ವಿಶೇಷವಾಗಿ ಅನುದಾನ ನೀಡಿರುವುದಕ್ಕೆ ಕೂಡ ಜಯಲಲಿತಾ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್