ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿದ ಮೋದಿ

ಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ ಮತ್ತು ತೆರಿಗೆ ವಂಚನೆ ಸ್ವಿಟ್ಜರ್ಲ್ಯಾಂಡ್ ಹಾಗೂ ಭಾರತ...

ಜಿನೇವಾ: ಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ ಮತ್ತು ತೆರಿಗೆ ವಂಚನೆ ಸ್ವಿಟ್ಜರ್ಲ್ಯಾಂಡ್ ಹಾಗೂ ಭಾರತ ಎದುರಿಸುತ್ತಿರುವ ಪ್ರಮುಖ ಸಮಸ್ಯೆ ಎಂದು ಸೋಮವಾರ ಹೇಳಿದ್ದಾರೆ.   
ಇಂದು ಜಿನೇವಾದಲ್ಲಿ ಸ್ವಿಸ್‌ ಮಹಾ ಒಕ್ಕೂಟದ ಅಧ್ಯಕ್ಷರಾಗಿರುವ ಜೊಹಾನ್‌ ಶ್ನಿಡರ್‌ ಅಮ್ಮಾನ್‌ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಮ್ಮ ದೇಶಗಳಿಗೆ ಕಪ್ಪು ಹಣದ ನಿಯಂತ್ರಣ ಹಾಗೂ ತೆರಿಗೆ ವಂಚನೆ ತಪ್ಪಿಸುವುದು ಒಂದು ಸವಾಲಾಗಿದೆ ಎಂದರು.
ದ್ವಿಪಕ್ಷೀಯ ಮಾತುಕತೆ ವೇಳೆ ಸ್ವಿಸ್‌ ಬ್ಯಾಂಕುಗಳಲ್ಲಿ ಭಾರತೀಯರು ಕಲೆ ಹಾಕಿರುವ ಕಪ್ಪು ಹಣವನ್ನು ಮರಳಿ ಭಾರತಕ್ಕೆ ಒಯ್ಯುವ ಭಾರತದ ಸಂಕಲ್ಪದ ಬಗ್ಗೆ ಮೋದಿ  ಜೊಹಾನ್‌ ಶ್ನಿಡರ್‌ ಅಮ್ಮಾನ್‌ ಅವರು ಚರ್ಚಿಸಿದ್ದಾರೆ. ಅಲ್ಲದೆ ಭಾರತದಲ್ಲಿ ಹೂಡಿಕೆ ಮಾಡುವಂತೆ ಸ್ವಿಸ್ ಉದ್ಯಮಿಗಳಿಗೆ ಮೋದಿ ಆಹ್ವಾನ ನೀಡಿದ್ದಾರೆ.ಐದು ದೇಶಗಳ 
ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಿಟ್ಜರ್‌ಲೆಂಡ್‌ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

IPL 2026: ಸ್ಟಂಪೌಟ್ ಮಾಡಿದ Sanju Samson ವಿರುದ್ಧ Klaasen ಆಕ್ರೋಶ, ಮೈದಾನದಲ್ಲೇ ಹೈಡ್ರಾಮಾ, ಆಗಿದ್ದೇನು?

ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧಿಸಿದ CBI

IPL 2026: SRH ಗೆಲುವಿನ ದಡ ಸೇರಿಸಿದ Ishan Kishan, ತವರಿನಲ್ಲೇ CSKಗೆ ಮುಖಭಂಗ, ಪ್ಲೇಆಫ್ ನಿಂದ ಬಹುತೇಕ ಔಟ್!

SCROLL FOR NEXT