ಸಂತೋಷ್ ಹೆಗ್ಡೆ 
ಪ್ರಧಾನ ಸುದ್ದಿ

ಜಯಲಲಿತಾ, ಸಲ್ಮಾನ್ ಪ್ರಕರಣಗಳಿಂದ ನ್ಯಾಯಾಂಗಕ್ಕೆ ಕೆಟ್ಟ ಹೆಸರು: ಸಂತೋಷ್ ಹೆಗ್ಡೆ

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಪ್ರಕರಣಗಳಿಂದ ನ್ಯಾಯಾಂಗಕ್ಕೆ ಕೆಟ್ಟ ಹೆಸರು...

ಹೈದರಾಬಾದ್: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಪ್ರಕರಣಗಳಿಂದ ನ್ಯಾಯಾಂಗಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರು ಸೋಮವಾರ ಹೇಳಿದ್ದಾರೆ.
ಈ ಎರಡು ಪ್ರಕರಣದ ನ್ಯಾಯಾಂಗ ನಿರ್ಧಾರಗಳು ಶ್ರೀಮಂತರು ಮತ್ತು ಪ್ರಭಾವಿಗಳು ಅತಿ ಬೇಗ ಜಾಮೀನು ಪಡೆದುಕೊಳ್ಳಬಹುದು ಎಂಬ ತಪ್ಪು ಸಂದೇಶ ರವಾನಿಸಿವೆ ಎಂದು ಸಂತೋಷ್ ಹೆಗ್ಡೆ ತಿಳಿಸಿದ್ದಾರೆ. ಅಲ್ಲದೆ ಶ್ರೀಮಂತರು ಮತ್ತು ಪ್ರಭಾವಿಗಳು ಕಾನೂನು ಕಟ್ಟಳೆಗಳಿಂದ ತಪ್ಪಿಸಿಕೊಳ್ಳಬಹುದು ಎಂಬ ಸಾರ್ವಜನಿಕ ಅಭಿಪ್ರಾಯವನ್ನು ನಾನು ಸಂಪೂರ್ಣ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.
'ನಾನು ಎರಡು ಪ್ರಕರಣಗಳಿಂದ ನ್ಯಾಯಾಂಗಕ್ಕೆ ಕೆಟ್ಟ ಹೆಸರು ಬಂದಿದೆ ಅಂತ ಹೇಳಲು ಬಯಸುತ್ತೇನೆ. ಒಂದು 14 ವರ್ಷಗಳ ನಂತರ ವಿಶೇಷ ಕೋರ್ಟ್ ಜಯಲಲಿತಾ ಅವರು ತಪ್ಪಿತಸ್ಥೆ ಎಂದು ತೀರ್ಪು ನೀಡಿತ್ತು ಮತ್ತು ಮೇಲ್ಮನವಿ ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಒಂದೇ ದಿನದಲ್ಲೇ ಅವರಿಗೆ ಜಾಮೀನು ನೀಡಿತ್ತು. ನಾನು ಅವರ ಜಾಮೀನಿಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಕೇವಲ 3 ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸುವಂತೆ ಸೂಚಿಸಲಾಗಿತ್ತು' ಎಂದರು.
ಇನ್ನು ಸಲ್ಮಾನ್ ಕೇಸ್ ನಲ್ಲೂ ಇದೆ ಆಗಿದೆ. ಸುದೀರ್ಘ 14 ವರ್ಷಗಳ ವಿಚಾರಣೆ ಬಳಿಕ ಬಾಲಿವುಡ್ ನಟನಿಗೆ ಶಿಕ್ಷೆಯಾಗಿತ್ತು. ಆದರೆ ಹೈಕೋರ್ಟ್ ಆತನಿಗೆ ಒಂದು ಗಂಟೆಯಲ್ಲೇ ಜಾಮೀನು ನೀಡಿತು. ಈ ಎರಡು ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ನಿವೃತ್ತಿ ಅಂಚಿನಲ್ಲಿದ್ದರು ಎಂದರು.
ಜೈಲಿನಲ್ಲಿರುವ ನೂರಾರು ಜನ ಜಾಮೀನಿಗಾಗಿ 4ರಿಂದ 5 ವರ್ಷಗಳ ಕಾಲ ಕಾಯುತ್ತಿದ್ದಾರೆ ಎಂದು ಮಾಜಿ ಲೋಕಾಯುಕ್ತರು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!