ನವದೆಹಲಿ: ಕೇಂದ್ರ ಸರ್ಕಾರದ ವೈದ್ಯರ ನಿವೃತ್ತಿ ವಯೋಮಿತಿಯನ್ನು ೬೫ ವರ್ಷಕ್ಕೆ ಏರಿಸಲು ಕೇಂದ್ರ ಸಂಪುಟ ಬುಧವಾರ ಸಮ್ಮತಿಸಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
"ವೈದ್ಯರ ಸಂಖ್ಯೆಯಲ್ಲಿ ವ್ಯತ್ಯಯ ಇರುವ ಅಂಶವನ್ನು ಗಮನದಲ್ಲಿಟ್ಟುಕೊಂಡು, ವೈದ್ಯರ ನಿವೃತ್ತಿ ವಯೋಮಿತಿಯನ್ನು ೬೨ ವರ್ಷದಿಂದ ೬೫ ವರ್ಷಕ್ಕೆ ಏರಿಸಲು ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಪ್ರಸಾದ್ ಹೇಳಿದ್ದಾರೆ.
ಕಳೆದ ತಿಂಗಳು ಉತ್ತರಪ್ರದೇಶದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಈ ಘೋಷಣೆಯ ಹಿನ್ನಲೆಯಲ್ಲಿ ಸಂಪುಟ ಈ ನಿರ್ಧಾರ ಕೈಗೊಂಡಿದೆ.
ಈ ಪ್ರಸ್ತಾವನೆ ಒಪ್ಪಿಗೆಯಾಗಿದ್ದು, ಮೇ ೩೧ ರಿಂದಲೇ ಈ ಹೊಸ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.