ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎಸಿಬಿಯಿಂದ ದುಬಾರಿ ವಾಚ್ ಗಿಫ್ಟ್ ಕೊಟ್ಟಿದ್ದ ಸಿಎಂ ಗೆಳೆಯ ಡಾ.ಗಿರೀಶ್ ವಿಚಾರಣೆ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ...

ಸಿಎಂ ಹಾಗೂ ದುಬಾರಿ ವಾಚ್
Lingaraj Badiger
Updated On : 15 Jun 2016, 7:26 am
ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಸಿಎಂ ಗೆಳೆಯ, ಅನಿವಾಸಿ ಭಾರತೀಯ ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಿಎಂ ದುಬಾರಿ ವಾಚ್ ಗೆ ಸಂಬಂಧಿಸಿದಂತೆ ಎಸಿಬಿಗೆ ಹಲವು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ವಾಚ್ ಗಿಫ್ಟ್ ನೀಡಿದ ವರ್ಮಾ ಅವರನ್ನು ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಎಸಿಬಿ ಕಚೇರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.
ಸಿಎಂ ದುಬಾರಿ ವಾಚ್ ರಾಜಕೀಯವಾಗಿ ಹಾಗೂ ಸಾರ್ವಜನಿಕವಾಗಿ ದೊಡ್ಡ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ತದನಂತರ ದುಬಾರಿ ವಾಚ್ ಅನ್ನು ಗೆಳೆಯ ಡಾ.ಗಿರೀಶ್ ಚಂದ್ರ ವರ್ಮಾ ನೀಡಿರುವುದಾಗಿ ಹೇಳಿ, ಸಿಎಂ ವಾಚ್ ಅನ್ನು ಸರ್ಕಾರದ ಸುಪರ್ದಿಗೆ ಒಪ್ಪಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement