ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭ ಶ್ರೀಗಳ ಆರ್ಶೀವಾದ ಪಡೆದ ಸಿಎಂ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸಿದ್ಧಗಂಗಾ ಶ್ರೀಗೆ ಅನಾರೋಗ್ಯ, ಬಿಜಿಎಸ್ ಆಸ್ಪತ್ರೆಗೆ ದಾಖಲು: ಸಿಎಂ, ಬಿಎಸ್ ವೈ ಭೇಟಿ

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ...

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
109 ವರ್ಷ ವಯೋಮಾನದ ಶಿವಕುಮಾರ ಸ್ವಾಮೀಜಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎಸ್.ಕೆ ವೆಂಕಟರಮಣ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ.
ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮಠದ ವಿಶ್ವನಾಥ್‌ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 
ಜ್ವರದಿಂದ ಬಳಲುತ್ತಿರುವ ಶ್ರೀಗಳಿಗೆ ಆಯಾಸವಾಗಿದೆ. ಅವರು ನಾಳೆಯೊಳಗೆ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಶ್ರೀಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಣರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

ಆಶಾ ಭೋಸ್ಲೆ ಅಂತಿಮ ದರ್ಶನ ಪಡೆದು, ಕಣ್ಣೀರ ವಿದಾಯ ಹೇಳಿದ ಸಚಿನ್, ಮೊಹಮ್ಮದ್ ಸಿರಾಜ್! Video

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

SCROLL FOR NEXT