ಜು.29ರಂದು ವಿಚಾರಣೆಗೆ ಹಾಜರಾಗುವಂತೆ ಮಲ್ಯಗೆ ಮುಂಬೈ ಕೋರ್ಟ್ ಆದೇಶ
ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮುಂಬೈ ವಿಶೇಷ...
ಮುಂಬೈ: ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮುಂಬೈ ವಿಶೇಷ ಕೋರ್ಟ್ ಜೂನ್ 29ರಂದು ವಿಚಾರಣೆಗೆ ಹಾಜರಾಗುವಂತೆ ಬುಧವಾರ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜುಲೈ 29ರಂದು ಬೆಳಗ್ಗೆ 11ಗಂಟೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಮುಂಬೈ ವಿಶೇಷ ಕೋರ್ಟ್ ನ್ಯಾಯಾಧೀಶ ಪಿ.ಆರ್.ಭವಕೆ ಅವರು ಲಂಡನ್ ನಲ್ಲಿರುವ ವಿಜಯ್ ಮಲ್ಯ ಅವರಿಗೆ ಸೂಚಿಸಿದ್ದಾರೆ.
ಈಗಾಗಲೇ ವಿಜಯ್ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸಿರುವ ಕೋರ್ಟ್, ಸಾಲದ ದೊರೆ ಶಿಕ್ಷಾರ್ಯ ಅಪರಾಧ ಮಾಡಿದ್ದಾರೆ ಎಂದು ಹೇಳಿತ್ತು.
ವಿಜಯ್ ಮಲ್ಯ ಅವರು 17 ವಿವಿಧ ಬ್ಯಾಂಕ್ ಗಳಿಂದ 9 ಸಾವಿರ ಕೋಟಿ ರುಪಾಯಿ ಸಾಲ ಪಡೆದಿದ್ದು, ಕಳೆದ ಮಾರ್ಚ್ 2ರಂದು ದೇಶ ತೊರೆದು, ಲಂಡನ್ ನಲ್ಲಿ ನೆಲೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.