ಪ್ರಧಾನ ಸುದ್ದಿ

ವಿಧಾನಸಭೆ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ, 7 ವಿಧೇಯಕ ಅಂಗೀಕಾರ

Lingaraj Badiger
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ಹಾಗೂ ರೈತರ ಮೇಲಿನ ಲಾಠಿ ಚಾರ್ಜ್ ಪ್ರಕರಣದ ಜಟಾಪಟಿಯೊಂದಿಗೆ 6 ದಿನಗಳ ಕಾಲ ನಡೆದ ವಿಧಾನಸಭಾ ಕಲಾಪಕ್ಕೆ ಶುಕ್ರವಾರ ತೆರೆ ಬಿದ್ದಿದೆ.
6 ದಿನಗಳ ಕಾಲ ನಡೆದ ವಿಧಾನಸಭಾ ಕಲಾಪದಲ್ಲಿ ಒಟ್ಟು 21 ಗಂಟೆ 27 ನಿಮಿಷ ಚರ್ಚೆ ನಡೆದಿದ್ದು, 7 ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ.
ವಿಧಾನಸಭೆ ಕಲಾಪದ ಕೊನೆಯ ದಿನವಾದ ಇಂದು ಕರ್ನಾಟಕ ಲೋಕಸೇವಾ ಆಯೋಗ ವಿಧೇಯಕ, ಬಾಲ್ಯ ವಿವಾಹ ನಿಷೇಧ ಕಾಯ್ದೆ ತಿದ್ದುಪಡಿ ವಿಧೇಯಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಗಿರವಿದಾರರ ತಿದ್ದುಪಡಿ ವಿಧೇಯಕ, ರಾಜ್ಯ ಅಲ್ಪಸಂಖ್ಯಾತರ ಆಯೋಗ ತಿದ್ದುಪಡಿ ವಿಧೇಯಕ ಹಾಗೂ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ಸೇರಿದಂತೆ 7 ವಿಧೇಯಕಗಳಿಗೆ ಇಂದು ವಿಧಾಸಭೆ ಅಂಗೀಕಾರ ನೀಡಿತು. ಬಳಿಕ ಕಾಲಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಅನಿರ್ಧಿಷ್ಟಾವಧಿಗೆ ಮುಂದೂಡಿದರು. 6 ದಿನಗಳ ಕಾಲ ನಡೆದ ಕಲಾಪದಲ್ಲಿ 
SCROLL FOR NEXT