ಬೆಂಗಳೂರು: ಓಮ್ನಿ ಹಾಗೂ ಬೈಕ್ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿರುವ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಭಾನುವಾರ ನಡೆದಿದೆ.
ಓಮ್ನಿ ಕಾರು ಹಳಿಯಾಳದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಗೋಕಾಕ್ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ, ಅಲ್ಲದೆ, ಮೂವರು ಗಂಭೀರವಾಗಿಗೊಂಡಿದ್ದಾರೆ. ಓಮ್ನಿಗೆ ಡಿಕ್ಕಿ ಹೊಡೆದ ಬಳಿಕ ಸ್ಥಳದಲ್ಲಿ ತೆರಳುತ್ತಿದ್ದ ಬೈಕ್ ಗೂ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಓಮ್ನಿಯಲ್ಲಿದ್ದ ದೇವು ಜಾದವ್ (35), ಶಶಿಕಲಾ ದೇವಮ್ಮ (42), ಅಕ್ಷತಾ ದೇವಮ್ಮ (22), ಶಾರದಾ (55), ಸಾವನ್ನಪ್ಪಿದ ದುರ್ದೈವಿಗಳು ಎಂದು ಹೇಳಲಾಗುತ್ತಿದ್ದು, ದ್ಯಾಮಣ್ಣ (45). ಜ್ಯೋತಿ (19), ಅನಿಲ್ (12) ಗಾಯಗೊಂಡವರು ಎಂದು ತಿಳಿದುಬಂದಿದೆ.
ಇನ್ನು ಡಿಕ್ಕಿ ಹೊಡೆದ ಬಸ್ ಗಣೇಶ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಆಗಿದ್ದು, ಘಟನೆಗೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ತಿಳಿದುಬಂದಿದೆ. ಪ್ರಸ್ತುತ ಪ್ರಕರಣ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಸ್ ಚಾಲಕನನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.