ಬೆಂಗಳೂರು: ಎತ್ತಿನಹೊಳೆ ಯೋಜನೆ ಸಂಬಂಧ ನಡೆಯಲಾಗುತ್ತಿರುವ ಸಭೆಯಲ್ಲಿ ರೈತರು ಸಂಸದ ವೀರಪ್ಪ ಮೊಯ್ಲಿಯವರ ವಿರುದ್ಧ ಹರಿಹಾಯ್ದಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಎತ್ತಿನ ಹೊಳೆ ಯೋಜನೆ ಸಂಬಂಧ ಇಂದು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಸಭೆಯಲ್ಲಿ ಸಂಸದ ವೀರಪ್ಪ ಮೊಯ್ಲಿ, ಇನ್ನಿತರೆ ಅಧಿಕಾರಿಗಳು ಹಾಗೂ ರೈತ ಸಂಘಟನೆಯ ಮುಖಂಡರು ಹಾಜರಿದ್ದರು.
ಸಭೆ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದರು. ನಂತರ ಮೊಯ್ಲಿಯವರು ಮಾತನಾಡುತ್ತಿದ್ದಂತೆ ಪ್ರಶ್ನೆಗಳ ಸುರಿಮಳೆ ಸುರಿಸಿದ ರೈತರು ಮೊಯ್ಲಿಯವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ರೈತರ ಆಕ್ರೋಶದಿಂದ ಕೆಂಗೆಟ್ಟ ಅವರು ಸಭೆಯಿಂದ ಹೊರ ನಡೆದರು ಎಂದು ತಿಳಿದುಬಂದಿದೆ.