ಕೊಡಂಗಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಾಜ್ಯದ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತೆಲಂಗಾಣದ ಮೆಹಬೂಬನಗರ ಜಿಲ್ಲೆಯ ಕೊಡಂಗಲ್ ಬಳಿ ಸೋಮವಾರ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಯಲ್ಲಪ್ಪ(40) ಹಾಗೂ ಆತನ ಪತ್ನಿ ನರಸಮ್ಮ(32) ಮತ್ತು ನಾಲ್ಕು ವರ್ಷದ ಹೆಣ್ಣು ಮಗು, ಸತಿಶ್(42) ಹಾಗೂ ಸತೀಶ್ ಅವರ 8 ವರ್ಷದ ಮಗಳು ಅಶ್ವಿನಿ ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ತೇಗಲತಿಪ್ಪಿ ಹಾಗೂ ಸಲಗರ್ ಗ್ರಾಮದವರು ಎನ್ನಲಾಗಿದೆ.
ಚಿಂಚೋಳಿ ತಾಲೂಕಿನ ಸುಲೇಪೇಟ್ ನಿಂದ ಸೇಡಂ ತಾಲೂಕಿನ ಯಾನೇಗುಂದಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.