ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಜನ: 70 ಕ್ಕೂ ಹೆಚ್ಚು ಗಾಯ
ದೇಗುಲ ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...
ಬೆಂಗಳೂರು: ದೇಗುಲ ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ತುಮಕೂರಿನ ಎತ್ತೇನಹಳ್ಳಿಯಲ್ಲಿ ಶಿವರಾತ್ರಿ ಪ್ರಯುಕ್ತ ಜಾತ್ರೆ ನಡೆಯುತ್ತಿತ್ತು. ಜಾತ್ರೆಗೆ ಸುತ್ತಮುತ್ತಲಿಂದ 7 ಗ್ರಾಮಗಳಿಂದ ಸಾವಿರಾರು ಭಕ್ತರು ಭಾಗವಹಿಸಿದ್ದರು. ಸಂಪ್ರದಾಯದ ಅಗ್ನಿ ಕೊಂಡ ಹಾಯುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಂತೆ ಕೊಂಡ ಹಾಯುವ ಹಲವು ಮಕ್ಕಳಲ್ಲಿ ಕಂಬತ್ನಳ್ಳಿ ಗ್ರಾಮದ ಹುಡುಗನೊಬ್ಬ ಆಯತಪ್ಪಿ ಜಾರಿ ಬಿದ್ದಿದ್ದಾನೆ. ಈ ವೇಳೆ ಆತನನ್ನು ರಕ್ಷಿಸಲು ಜನರು ಮುಂದಾದಾಗ ಒಬ್ಬರ ಮೇಲೊಬ್ಬರಂತೆ ಕೊಂಡಕ್ಕೆ ಜನ ಬಿದ್ದಿದ್ದಾರೆ.
ಘಟನೆ ವೇಳೆ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.