ಕಾರ್ಯಕ್ರಮ ನಡೆಯುವ ಸ್ಥಳದ ಒಂದು ನೋಟ 
ಪ್ರಧಾನ ಸುದ್ದಿ

'ಆರ್ಟ್‌ ಆಫ್ ಲಿವಿಂಗ್‌' ಕಾರ್ಯಕ್ರಮ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆದುಕೊಂಡಿದೆ: ಕೇಂದ್ರ

ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರ 'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ'....

ನವದೆಹಲಿ: ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರ 'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ' ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆದುಕೊಂಡಿದೆ ಎಂದು ಬುಧವಾರ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇಂದು ರಾಜ್ಯಸಭೆಯಲ್ಲಿ ವಿಶ್ವ ಸಂಸ್ಕೃತಿ ಉತ್ಸವಕ್ಕೆ ಸೇನಾಪಡೆಯನ್ನು ಬಳಸಿಕೊಂಡ ಕೇಂದ್ರದ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್ ಹಾಗೂ ಜೆಡಿಯುನ ಶರದ್ ಯಾದವ್ ಅವರು,  ಕಾರ್ಯಕ್ರಮದಿಂದ ಯಯುನಾ ನದಿ ಹಾಳಾಗುತ್ತದೆ ಎಂದು ಪರಿಸರವಾದಿಗಳ ಆರೋಪಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ನಿರಾಕ್ಷೇಪಣಾ ಪತ್ರ ಇಲ್ಲದಯೇ ಕಾರ್ಯಕ್ರಮ ನಡೆಸಲು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರ, 'ಆರ್ಟ್‌ ಆಫ್ ಲಿವಿಂಗ್‌' ಕಾರ್ಯಕ್ರಮದಿಂದ ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಮತ್ತು ಕಾರ್ಯಕ್ರಮ ನಡೆಸಲು ಬೇಕಾದ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಈ ವಿಷಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ)ಯಲ್ಲಿರುವುದರಿಂದ ಇದನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸುವ ಅಗತ್ಯ ಇರಲಿಲ್ಲ ಎಂದು ಹೇಳಿದೆ.
ಸರ್ಕಾರದ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಪಕ್ಷಗಳು ವಿಶ್ವ ಸಾಂಸ್ಕೃತಿ ಉತ್ಸವಕ್ಕೆ ಸೇನೆಯನ್ನು ಬಳಸಿಕೊಂಡಿರುವ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದವು. ಖಾಸಗಿ ಕಾರ್ಯಕ್ರಮಕ್ಕೆ ಸೇನೆ ಬಳಸುವುದು ಎಷ್ಟು ಸರಿ ಎಂದು ಪ್ರಶ್ಮಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.
ಮಾ.11ರಿಂದ 13ರ ವರೆಗೆ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಯಮುನಾ ದಂಡೆಯ ಮೇಲೆ ಬೃಹತ್‌ ವೇದಿಕೆ ಸಿದ್ಧಪಡಿಸಿದ್ದು, ಟೆಂಟ್‌ ಮತ್ತು ರಸ್ತೆಗಳನ್ನು ನಿರ್ಮಾಣಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT