ಮೊಬೈಲ್ ಫ್ಲ್ಯಾಶ್ ಲೈಟ್ ಬೆಳಕಿನಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ 
ಪ್ರಧಾನ ಸುದ್ದಿ

ಸಿಎಂ ಬಜೆಟ್ ಮಂಡನೆ ವೇಳೆ ಪವರ್ ಕಟ್: ನಾಲ್ವರು ಅಧಿಕಾರಿಗಳ ಅಮಾನತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸೌಧದಲ್ಲಿ ಬಜೆಟ್ ಬಂಡಿಸುತ್ತಿದ್ದ ಸಂದರ್ಭದಲ್ಲೇ ವಿದ್ಯುತ್ ಕಡಿತಗೊಂಡ ಘಟನೆಗೆ ಸಂಬಂಧಿಸಿದಂತೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸೌಧದಲ್ಲಿ  ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲೇ ವಿದ್ಯುತ್ ಕಡಿತಗೊಂಡ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.
ಕರ್ತವ್ಯಲೋಪ ಆರೋಪದ ಮೇಲೆ ವಿಧಾಸೌಧ ವಿದ್ಯುತ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸಿ.ರಾಮಲಿಂಗಯ್ಯ ಸೇರಿದಂತೆ ನಾಲ್ವರು ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.
ಬಜೆಟ್ ಮಂಡನೆ ವೇಳೆ ಎರಡು ಬಾರಿ ವಿದ್ಯುತ್ ಕೈಕೊಟ್ಟಿದ್ದರಿಂದ ಸಿದ್ದರಾಮಯ್ಯ ಅವರು ಅಧಿಕಾರಿಯೊಬ್ಬರ ಮೊಬೈಲ್ ಫ್ಲ್ಯಾಶ್ ಲೈಟ್ ನಲ್ಲಿ ಭಾಷಣ ಓದಲು ಯತ್ನಿಸಿದ್ದರು. ಬಳಿಕ ವಿದ್ಯುತ್ ಬಂದಾಗ ಭಾಷಣ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕತ್ತಲ ಭಾಗ್ಯ ಎಂದು ವ್ಯಂಗ್ಯವಾಡಿದ್ದರು.
ಘಟನೆಯಿಂದ ತೀವ್ರ ಮುಜುಗರ ಅನುಭವಿಸಿದ್ದ ಸಿಎಂ ಬಜೆಟ್ ಮಂಡನೆ ಬಳಿಕ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದರು. ಈ ವೇಳೆ ನಮ್ಮ ಇಲಾಖೆಯಿಂದ ಯಾವುದೇ ತಪ್ಪಾಗಿಲ್ಲ. ಆದರೆ ವಿಧಾನಸೌಧದಲ್ಲೇ ತಾಂತ್ರಿಕ ಸಮಸ್ಯೆಯಿಂದ ವಿದ್ಯುತ್ ಕಡಿತಗೊಂಡಿರಬಹುದು ಎಂದಿದ್ದರು. ಇದಾದ ನಂತರ ಸಚಿವರು ಅಧಿಕಾರಿಗಳು ಅಮಾನತಿಗೆ ಸೂಚಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!