ಬೆಂಗಳೂರು: ಸಿಬಿಐ ತನಿಖಾ ವರದಿ ಬಹಿರಂಗಕ್ಕೆ ಆಗ್ರಹಿಸಿ ಕಳೆದ ಒಂದು ವಾರದಿಂದ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಿಗೂಢವಾಗಿ ಮೃತಪಟ್ಟ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪೋಷಕರು ಮಂಗಳವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಆನಂದ್ ರಾವ್ ಸರ್ಕಲ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ಡಿ.ಕೆ.ರವಿ ಅವರ ತಾಯಿ ಗೌರಮ್ಮ, ತಂದೆ ಕರಿಯಪ್ಪ ಹಾಗೂ ಸಹೋದರ ಡಿ.ಕೆ.ರಮೇಶ್ ಅವರು ಸೇರಿದಂತೆ ಹಲವು ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ರೇಸ್ ಕೋರ್ಸ್ ರಸ್ತೆಯಲ್ಲೇ ತಡೆದರು. ಇದರಿಂದ ಆಕ್ರೋಶಗೊಂಡ ಗೌರಮ್ಮ ಡಿಸಿಪಿ ಸಂದೀಪ್ ಪಾಟೀಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು,
ಡಿ.ಕೆ.ರವಿ ಪೋಷಕರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ಆಡುಗೋಡಿಯ ಸಿಆರ್ ಮೈದಾನಕ್ಕೆ ಕರೆದೊಯ್ದಿದ್ದಾರೆ.
2015 ಮಾ.16 ರಂದು ಡಿ.,ಕೆ ರವಿ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಬೆಂಗಳೂರಿನ ಫ್ಲ್ಯಾಟ್ ವೊಂದರಲ್ಲಿ ರವಿ ಅವರ ಮೃತ ದೇಹ ಸಿಕ್ಕಿತ್ತು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ವಹಿಸಿದ್ದು, ತನಿಖೆ ಪ್ರಗತಿಯಲ್ಲಿದೆ.