ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪ್ರಧಾನಿ ಜೊತೆಗಿನ ಭೇಟಿ ಧನಾತ್ಮಕವಾಗಿತ್ತು: ಮೆಹಬೂಬಾ

ಪ್ರಧಾನಿ ನರೇಂದ್ರ ಮೋದಿ ಅವರ ಜೊತಿಗಿನ ಭೇಟಿ ಧನಾತ್ಮಕವಾಗಿತ್ತು ಎಂದಿದ್ದಾರೆ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ .

ಪ್ರಧಾನಿ ನರೇಂದ್ರ ಮೋದಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ
Guruprasad Narayana
Updated On : 22 Mar 2016, 12:10 pm

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೊತಿಗಿನ ಭೇಟಿ ಧನಾತ್ಮಕವಾಗಿತ್ತು ಎಂದಿದ್ದಾರೆ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ .

"ಇದು ಪ್ರಧಾನಿ ಜೊತೆಗಿನ ಧನಾತ್ಮಕ ಭೇಟಿಯಾಗಿತ್ತು ಮತ್ತು ಶ್ರೀನಗರಕ್ಕೆ ಹಿಂದಿರುಗಿ ಮುಂದಿನ ನಡೆ ನಿರ್ಧರಿಸುತ್ತೇನೆ" ಎಂದು ಪ್ರಧಾನಿಯವರ ಅಧಿಕೃತ ನಿವಾಸ ೭ ರೇಸ್ ಕೋರ್ಸ್ ರಸ್ತೆಯ, ಹೊರಗೆ ಮಾಧ್ಯಮಗಳಿಗೆ ಮುಫ್ತಿ ತಿಳಿಸಿದ್ದಾರೆ.

"ಪ್ರಧಾನಿ ಜೊತೆಗಿನ ಭೇಟಿಯ ನಂತರ ನನಗೆ ಸಂತಸವಾಗಿದೆ" ಎಂದು ಕೂಡ ಅವರು ತಿಳಿಸಿದ್ದಾರೆ.

"ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದಲೂ ಮಾತುಕತೆ ಮುರಿದುಬಿದ್ದಿವೆ. ಈ ಭೇಟಿಯ ನಂತರ ಭರವಸೆ ಮೂಡಿದೆ" ಎಂದು ದಿವಂಗತ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರ ಪುತ್ರಿ ಹೇಳಿದ್ದಾರೆ.

ಬಿಜೆಪಿ ಮತ್ತು ಪಿಡಿಪಿ ಸೇರಿ ರಚಿಸಿದ್ದ ಸರ್ಕಾರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ನಿಧನದ ನಂತರ ಮುರಿದು ಬಿದ್ದಿತ್ತು.

ಗುರುವಾರ ಪಕ್ಷದ ಶಾಸಕಾಂಗ ಸಭೆ ಕರೆದಿರುವ ಮೆಹಬೂಬಾ ಮುಫ್ತಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments