6 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಬಿಗಿ ಭದ್ರತೆ
ಆರು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಇಂದಿರಾಗಾಂಧಿ ಅಂತರ...
ನವದೆಹಲಿ: ಆರು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಇಂದಿರಾಗಾಂಧಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಪಶ್ಚಿಮ್ ವಿಹಾರ್ ಎಂಬ ಹೋಟೆಲ್ ಗೆ ಕರೆ ಮಾಡಿದ ಅಪರಿಚಿತರು ಜೆಟ್ ಏರ್ ವೇಸ್ ಸೇರಿದಂತೆ 6 ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಕೈಗೊಳ್ಳಲಾಗಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಈವರೆಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದ್ದು, ಬಾಂಬ್ ಬೆದರಿಕೆ ಪರಿಶೀಲನಾ ಸಮಿತಿಯು ದೂರವಾಣಿಯ ಕರೆಯ ಪರಿಶೀಲನೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ.