ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸದನದಲ್ಲಿ ವಕ್ಫ್ ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಬುಧವಾರ ಸೂಚನೆ ನೀಡಿದ್ದಾರೆ.
ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್, ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದವು.
ಪ್ರತಿಪಕ್ಷಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಪಾಲರು, ವಕ್ಫ್ ಮಂಡಳಿ ಆಸ್ತಿ ಕಬಳಿಗೆ ಕುರಿತು 24 ಗಂಟೆಯೊಳಗೆ ವರದಿ ನೀಡುವಂತೆ ಸಿಎಂಗೆ ಸೂಚಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ದಿನದಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ವರದಿ ಮಂಡಿಸದೇ ಇರುವುದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ರಾಜ್ಯಪಾಲರು ಕಳವಳ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics