ಜವಾಹರ್ ಲಾಲ್ ವಿಶ್ವವಿದ್ಯಾಲಯ 
ಪ್ರಧಾನ ಸುದ್ದಿ

ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡನ ಸ್ಥಿತಿ ಸ್ಥಿರ: ವೈದ್ಯ

ಉಪವಾಸ ಸತ್ಯಾಗ್ರಹದಿಂದ ಆರೋಗ್ಯದಲ್ಲಿ ಅಸ್ಥಿರತೆ ಕಂಡು ಆಸ್ಪತ್ರೆಗೆ ದಾಖಲಾಗಿದ್ದ ಜವಾಹರ್ ಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮುಖಂಡ ಸೌರಭ್ ಶರ್ಮಾ ಅವರು ಈಗ ಸ್ಥಿರವಾಗಿದ್ದಾರೆ

ನವದೆಹಲಿ: ಉಪವಾಸ ಸತ್ಯಾಗ್ರಹದಿಂದ ಆರೋಗ್ಯದಲ್ಲಿ ಅಸ್ಥಿರತೆ ಕಂಡು ಆಸ್ಪತ್ರೆಗೆ ದಾಖಲಾಗಿದ್ದ ಜವಾಹರ್ ಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮುಖಂಡ ಸೌರಭ್ ಶರ್ಮಾ ಅವರು ಈಗ ಸ್ಥಿರವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.

"ಈಗ ಸೌರಭ್ ಶರ್ಮಾ ಅವರ ಸ್ಥಿತಿ ಸ್ಥಿರವಾಗಿದೆ. ಅವರ ರಕ್ತದಲ್ಲಿ ಸಕ್ಕರೆ ಅಂಶ ಇಳಿದಿತ್ತು ಆದರೆ ಈಗ ಸಾಧಾರಣ ಸ್ಥಿತಿಗೆ ಮರಳಿದೆ. ಅವರನ್ನು ವೈದ್ಯರು ಪರಿಶೀಲನೆಯಲ್ಲಿಟ್ಟಿದ್ದು, ಆತಂಕ ಪಡುವ ಅಗತ್ಯವಿಲ್ಲ" ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹದಿಂದ ಆರೋಗ್ಯದಲ್ಲಿ ವ್ಯತ್ಯಯ ಕಂಡಿದ್ದರಿಂದ ಜೆ ಎನ್ ಎಸ್ ಸಿ ಯು ಪ್ರಧಾನ ಕಾರ್ಯದರ್ಶಿ ಶರ್ಮಾ ಅವರನ್ನು ಸೋಮವಾರ ಮಧ್ಯಾಹ್ನ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಫೆಬ್ರವರಿ ೯ ರ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ವಿಶ್ವವಿದ್ಯಾಲಯದ ಉನ್ನತ ಸಮಿತಿ ಶರ್ಮಾ ಅವರಿಗೆ ೧೦೦೦೦ ರೂ ದಂಡ ಹಾಕಿತ್ತು. ಇದನ್ನು ವಿರೋಧಿಸಿ ಅವರು ಮತ್ತು ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ಸದಸ್ಯರು ಅನಿರ್ಧಿಷ್ಟ ಕಾಲಾವಧಿಯವರೆಗೆ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಫೆಬ್ರವರಿ ೯ ರ ಘಟನೆಯಿಂದಾಗಿ ಕೆಲವು ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿರುವುದನ್ನು ವಿರೋಧಿಸಿ ಜೆ ಎನ್ ಎಸ್ ಸಿ ಯು ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿದಂತೆ ಇತರ ಜೆ ಎನ್ ಎಸ್ ಸಿ ಯು ಸದಸ್ಯರು ಹಾಗೂ ಎ ಬಿ ವಿ ಪಿ ಸದಸ್ಯರು ಕೂಡ ಉಪವಾಸ ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT