ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ 
ಪ್ರಧಾನ ಸುದ್ದಿ

ಸುಷ್ಮಾ ಆರೋಗ್ಯದಲ್ಲಿ ಚೇತರಿಕೆ; ಶೀಘ್ರದಲ್ಲೇ ಆಸ್ಪತ್ರೆಯಿಂದ ಮನೆಗೆ: ಎ ಐ ಐ ಎಂ ಎಸ್

ಎದೆ ನೋವು ಮತ್ತು ಆರ್ಥರೈಟಿಸ್ ತೊಂದರೆಗಳಿಂದ ದೆಹಲಿಯ ಎ ಐ ಐ ಎಂ ಎಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ

ನವದೆಹಲಿ: ಎದೆ ನೋವು ಮತ್ತು ಆರ್ಥರೈಟಿಸ್ ತೊಂದರೆಗಳಿಂದ ದೆಹಲಿಯ ಎ ಐ ಐ ಎಂ ಎಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

"ಸುಷ್ಮಾ ಸ್ವರಾಜ್ ಅವರ ಆರೋಗ್ಯ ನಿರಂತರವಾಗಿ ಚೇತರಿಸಿಕೊಳ್ಳುತ್ತಿದೆ. ಆತಂಕ ಪಡುವ ಅಗತ್ಯ ಇಲ್ಲ. ಅವರನ್ನು ಶೀಘ್ರದಲ್ಲೇ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುವುದು ಆದರೆ ನಿಖರವಾದ ದಿನ ಹೇಳಲು ಸಾಧ್ಯವಿಲ್ಲ" ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಕ್ತಾರ ಅಮಿತ್ ಗುಪ್ತಾ ತಿಳಿಸಿದ್ದಾರೆ.

ಚಿಕಿತ್ಸೆ ವೇಳೆಯಲ್ಲಿ ಬೇರೆ ತೊಂದರೆಗಳಿಗೆ ಸುಷ್ಮಾ ಒಳಗಾಗಿದ್ದಾರೆಯೇ ಎಂಬ ಪ್ರಶ್ನೆಗೆ "ಗಂಭೀರವಾದದ್ದೇನಿಲ್ಲ. ಅವರು ಮೊದಲಿನಿಂದ ಹೃದ್ರೋಗ ಚಿಕಿತ್ಸೆ ಪಡೆಯುತ್ತಿದ್ದರು ಆದುದರಿಂದ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಆದರೆ ಈಗ ಸ್ಥಿರವಾಗಿದ್ದಾರೆ" ಎಂದು ಕೂಡ ಗುಪ್ತಾ ಹೇಳಿದ್ದಾರೆ.

ಕಳೆದ ವಾರ ಎದೆ ನೋವು ಮತ್ತು ಆರ್ಥರೈಟಿಸ್ ತೊಂದರೆಗಳಿಂದ ದೆಹಲಿಯ ಎ ಐ ಐ ಎಂ ಎಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಧ್ಯಪ್ರದೇಶ ಶಿವರಾಜ್ ಸಿಂಗ್ ಚೌಹಾನ್ ಮತ್ತಿತರು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!