ಪ್ರಧಾನ ಸುದ್ದಿ

ಶೀಘ್ರ 17 ಸಾವಿರ ಶಿಕ್ಷಕರ ನೇಮಕ: ಕಿಮ್ಮನೆ ರತ್ನಾಕರ

Lingaraj Badiger
ಬೆಂಗಳೂರು: ಶೀಘ್ರದಲ್ಲೇ 17 ಸಾವಿರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಹೊಸದಾಗಿ 17 ಸಾವಿರ ಶಿಕ್ಷಕರ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆ ಅನುಮತಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
1ನೇ ತರಗತಿಯಿಂದ ಪಿಯುಸಿಯವರೆಗೆ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ. ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತ ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದರು.
ಇದೇ ವೇಳೆ ಶಿಕ್ಷಕರ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿದ ಕಿಮ್ಮನೆ ರತ್ನಾಕರ ಅವರು, ಮೇ ತಿಂಗಳಲ್ಲಿ ಸಾಮೂಹಿಕ ವರ್ಗಾವಣೆ ನಡೆಸಲಾಗುವುದು. ಬಿಇಓ ಮತ್ತು ಡಿಡಿಪಿಐ ಗಳನ್ನ ಜೂನ್ ತಿಂಗಳಲ್ಲಿ ವರ್ಗಾವಣೆ ಮಾಡಲಾಗುವುದು. ಆದರೆ ಸ್ವಂತ ಜಿಲ್ಲೆಗಳಲ್ಲಿ ಅವರು ಕೆಲಸ ನಿರ್ವಹಿಸುವಂತಿಲ್ಲ ಎಂದರು.
SCROLL FOR NEXT