ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಅಕ್ರಮ ನೇಮಕ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತರೊಬ್ಬರು...

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುರುವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಎಂಬ ಕಾರಣಕ್ಕೆ ಲಕ್ಷ್ಮಣ್ ಎಂಬವರನ್ನು ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಆದರೆ ಅವರ  ಆಯ್ಕೆ ಪ್ರಕ್ರಿಯೆ ಕಾನೂನಾತ್ಮಕವಾಗಿ ಮತ್ತು ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಕಾನೂನನ್ನು ಗಾಳಿಗೆ ತೂರಿ ಲಕ್ಷ್ಮಣ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಆಯ್ಕೆ ಮಾಡಬೇಕಿದ್ದರೆ, ಪರಿಸರ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಆದರೆ ಲಕ್ಷ್ಮಣ್ ಅವರು ಆ ಪದವಿ ಪಡೆದಿಲ್ಲ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕೆಂದು ನರಸಿಂಹಮೂರ್ತಿ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!