ಬೆಂಗಳೂರು: 2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಉಡುಪಿ ದ್ವಿತೀಯ ಹಾಗೂ ಮಂಗಳೂರು ತೃತೀಯ ಸ್ಥಾನ ಪಡೆದಿದೆ. ಇನ್ನೂ ಬಳ್ಳಾರಿ ಜಿಲ್ಲೆ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಿಸಿದ್ದು, ಸಂಜೆ ನಾಲ್ಕು 4 ಗಂಟೆಯ ನಂತರ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು,
ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 82.64ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ. 75.84ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಒಟ್ಟು ಶೇ.79.16ರಷ್ಟು ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕಿಂತ ಶೇ.2ರಷ್ಟು ಕಡಿಮೆ ಬಂದಿದೆ ಎಂದು ಶಿಕ್ಷಣ ಸಚಿವರು ಹೇಳಿದರು. ಇನ್ನೂ ಮೂರು ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದರು.
ಇದೇ ವೇಳೆ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಕಿಮ್ಮನೆ ರತ್ನಾಕರ, ಅನುತ್ತೀರ್ಣರಾದವರು ಧೈರ್ಯ ಕಳೆದುಕೊಳ್ಳುವುದು ಬೇಡ. ಜೂನ್ 20ರಂದು ಮರು ಪರೀಕ್ಷೆ ನಡೆಯಲಿದ್ದು ಮತ್ತೊಮ್ಮೆ ಯತ್ನಿಸಿ ಉತ್ತೀರ್ಣರಾಗಿ ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ರಂಜನ್ ರಾಜ್ಯಕ್ಕೆ ಪ್ರಥಮ
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ಎಸ್.ರಂಜನ್ ಅವರು ಇದೇ ಮೊದಲ ಬಾರಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಇನ್ನು ಬೆಂಗಳೂರಿನ ಬನಶಂಕರಿಯ ಹೊಲಿ ಚೈಲ್ಡ್ ಶಾಲೆಯ ವಿದ್ಯಾರ್ಥಿನಿ ಸುಪ್ರಿತಾ ಅವರು 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು, karresults.nic.in OR sslc.kar.nic.in, http://kseeb.kar.nic.in/ ಮತ್ತು http://karresults.nic.in/ ಜಾಲತಾಣಗಳ ಮೂಲಕ ಪಡೆಯಬಹುದಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos