ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಬುಧವಾರ ದೂರು ದಾಖಲಿಸಲಾಗಿದೆ.
ಪೊಲೀಸರ ವರ್ಗಾವಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಲ್ಲಿ ಸಿಎಂ ಹಾಗೂ ಸಚಿವರ ಕೈವಾಡ ಇದೆ ಎಂದು ಆರೋಪಿಸಿರುವ ಆರ್ ಟಿಐ ಕಾರ್ಯಕರ್ತ ಶಶಿಧರ್ ಎಂಬುವವರು ವರ್ಗಾವಣೆ ದಂಧೆ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಅವರು, ಕಾನೂನು ಪ್ರಕಾರ ವರ್ಗಾವಣೆ ಮಾಡಿ ಅಂತ ಶಾಸಕರು, ಸಚಿವರು ಶಿಫಾರಸು ಪತ್ರ ಕೊಡುವುದು ಸಾಮಾನ್ಯ. ಶಿಫಾರಸು ಪತ್ರವನ್ನೂ ಕೊಡಬಾರದು ಅಂದರೆ ಹೇಗೆ ಎಂದು ಸಮರ್ಥಿಸಿಕೊಂಡಿದ್ದಾರೆ.