ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ: ಮೋದಿ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ...

ನವದೆಹಲಿ: ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.
ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಇಂದು ಸಂಜೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಅಸ್ಸಾಂನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ ಎಂದರು. ಅಲ್ಲದೆ ಈ ಫಲಿತಾಂಶ ಎನ್ ಡಿಎ ಮೈತ್ರಿಕೂಟಕ್ಕೆ ಉತ್ಸಾಹದಾಯಕವಾಗಿದ್ದು, ಐದು ರಾಜ್ಯಗಳ ಮತದಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಈಗ ಮತದಾರರಿಗೆ ಬಿಜೆಪಿ ಮೇಲೆ ವಿಶ್ವಾಸ ಹೆಚ್ಚುತ್ತಿದ್ದು, ಬಿಜೆಪಿಯ ಅಭಿವೃದ್ಧಿ ಪರ ಚಿಂತನೆಗೆ ಜನ ಬೆಂಬಲಿಸುತ್ತಿದ್ದಾರೆ ಎಂದು ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇದೇ ವೇಳೆ ಈಶಾನ್ಯ ರಾಜ್ಯಗಳಲ್ಲಿ ಮೊದಲ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ತಂಡ ಮತ್ತು ರಾಜ್ಯ ಘಟವನ್ನು ಪ್ರಧಾನಿ ಅಭಿನಂದಿಸಿದರು.
ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರ ಬಿದ್ದಿದ್ದು, 126 ಸ್ಥಾನಗಳ ಪೈಕಿ ಬಿಜೆಪಿ 86ರಲ್ಲಿ ಗೆಲ್ಲುವ ಮೂಲಕ ಈಶಾನ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೇರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ