ಮಾಜಿ ಪ್ರಧಾನಿ ದೇವೇಗೌಡ 
ಪ್ರಧಾನ ಸುದ್ದಿ

ಕೇರಳ: 3 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು, ಎಡರಂಗಕ್ಕೆ ಶುಭಾಶಯ ಕೋರಿದ ದೇವೇಗೌಡ

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಎಡರಂಗ ಮೈತ್ರಿಕೂಟದ ಜೆಡಿಎಸ್ ಸಹ ಮೂರು ಸ್ಥಾನಗಳಲ್ಲಿ ಗೆಲುವು...

ಬೆಂಗಳೂರು: ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಎಡರಂಗ ಮೈತ್ರಿಕೂಟದ ಜೆಡಿಎಸ್ ಸಹ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಕಳೆದ ಮೇ 16ರಂದು ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಎಡರಂಗದೊಂದಿಗೆ ಮೈತ್ರಿ ಮಾಡಿಕೊಂಡು ಐದು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆ ಪೈಕಿ ಈಗ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೇರಳದಲ್ಲಿ ಒಂದು ವಾರಗಳ ಕಾಲ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು.
ಫಲಿತಾಂಶದ ಬಳಿಕ ಕೇರಳದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಎಡರಂಗ ನಾಯಕ ವಿ.ಎಸ್.ಅಚ್ಚುತಾನಂದನ್ ಅವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, ಭರ್ಜರಿ ಗೆಲುವು ಸಾಧಿಸಿದ ಎಡರಂಗ ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಜೆಡಿಎಸ್ ನಿಂದ ಕೇರಳ ತಿರುವಳ್ಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮ್ಯಾಥ್ಯೂ ಟಿ ಥಾಮಸ್, ಚಿತ್ತೂರಿ ಕ್ಷೇತ್ರದಿಂದ ಸ್ಪರ್ಥಿಸಿದ್ದ ಕೃಷ್ಣನ್ ಕುಟ್ಟಿ ಹಾಗೂ ವಡಕ್ಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ನ ಸಿ.ಕೆ.ನಾಣು ಅವರು ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SCROLL FOR NEXT