ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನೀಟ್ ಪರೀಕ್ಷೆ ಒಂದು ವರ್ಷ ಮುಂದೂಡಿಕೆ: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ...

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್'ಅನ್ನು ಒಂದು ವರ್ಷ ಮುಂದೂಡಲು ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. 
ಪರೀಕ್ಷೆಯನ್ನು ನಡೆಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಮನವಿ ಮಾಡಿಕೊಂಡ ಕಾರಣ ಶುಕ್ರವಾರ ಬೆಳಿಗ್ಗೆ ಕೇಂದ್ರ ಸರ್ಕಾರ ಒಂದು ವರ್ಷ ನೀಟ್ ಪರೀಕ್ಷೆಯನ್ನು ಮುಂದೂಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಸುಗ್ರಿವಾಜ್ಞೆಯಿಂದ ಅನೇಕ ವಿದ್ಯಾರ್ಥಿಗಳಿಗೆ ನಿರಾಳ ಸಿಕ್ಕಂತಾಗಿದೆ. 
ಇದಕ್ಕೂ ಮುನ್ನ ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು 14 ರಾಜ್ಯಗಳ  ಆರೋಗ್ಯ ಸಚಿವರೊಂದಿಗೆ ಹಾಗೂ ಕೇಂದ್ರ ಕಾನೂನು ಸಚಿವ ಅರುಣ್ ಜೈಟ್ಲಿ ಒಳಗೊಂಡು ಕಾಂಗ್ರೆಸ್ ಹಾಗೂ ಪ್ರಮುಖ ಪಕ್ಷಗಳೊಂದಿಗೆ ನಡೆಸಿದ ಎರಡು ಮಹತ್ತರ ಸಭೆಗಳ ನಂತರ ಒಮ್ಮತದ ನಿರ್ಧಾರಕ್ಕೆ ಬರಲಾಯಿತು.
ಈಗಾಗಲೇ ಮೇ.1 ರಂದು ನಡೆದ ಮೊದಲ ಹಂತದ ನೀಟ್ ಪರೀಕ್ಷೆಯಲ್ಲಿ 6.5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದು, ಎರಡನೇ ಹಂತದ ಪರೀಕ್ಷೆ ಜುಲೈ 24 ರಂದು ನಡೆಯಲಿದೆ. ರಾಜ್ಯಗಳು ಹಾಗೂ ಖಾಸಗಿ ಕಾಲೇಜುಗಳು ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೊಡ್ಡ ಸಂಖ್ಯೆಯಲ್ಲಿ ದೂರು ಬಂದ ಕಾರಣ ಕಳೆದ ತಿಂಗಳು ಸುಪ್ರೀಂ ಕೋರ್ಟ್ ದೇಶಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಬೇಕೆಂದು ಮಹತ್ವರ ಆದೇಶ ಹೊರಡಿಸಿತ್ತು.
ಆದರೆ ಆದೇಶ ಬಂದ ನಂತರ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಒಳಗೊಂಡು ಹಲವು ರಾಜ್ಯಗಳು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಒಂದು ವರ್ಷ ಮುಂದೂಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!