ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

'ನೀಟ್ ಸುಗ್ರೀವಾಜ್ಞೆ' ರಾಷ್ಟ್ರಪತಿಗಳಿಗೆ ರವಾನೆ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್'ಅನ್ನು ಒಂದು ವರ್ಷಗಳ...

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್'ಅನ್ನು ಒಂದು ವರ್ಷಗಳ ಕಾಲ ಮುಂದೂಡುವುದಕ್ಕಾಗಿ ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಶನಿವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರ ಸಹಿಗಾಗಿ ಕಳುಹಿಸಿಕೊಡಲಾಗಿದೆ.
ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಈ ವರ್ಷದ ಮಟ್ಟಿಗೆ ರಾಜ್ಯ ಸರ್ಕಾರಿ ಪ್ರವೇಶ ಪರೀಕ್ಷೆ (ಸಿಇಟಿ)ಗಳಿಗೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ರೂಪಿಸಿರುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದರೆ ಕರ್ನಾಟಕ, ತಮಿಳುನಾಡು, ಕೇರಳ, ಗುಜರಾತ್ ಮಹಾರಾಷ್ಟ್ರ ಮತ್ತು ಪಂಜಾಬ್ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಸುಗ್ರೀವಾಜ್ಞೆ ಜಾರಿಯಾದರೆ ಇಲ್ಲಿಯವರೆಗೆ ನಡೆಯುತ್ತಿದ್ದಂತೆ ಸರ್ಕಾರಿ ಕಾಲೇಜುಗಳ ಸೀಟುಗಳ ಜತೆಗೆ ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆ ಸಿಇಟಿ ಮೂಲಕವೇ ನಡೆಯಲಿದೆ. ಆದರೆ, ಕಾಮೆಡ್‌-ಕೆ ಯುಜಿಇಟಿ ಮೂಲಕ ಹಂಚಿಕೆಯಾಗುತ್ತಿದ್ದ ಮ್ಯಾನೇಜ್‌ಮೆಂಟ್‌ ಕೋಟಾದ ಸೀಟುಗಳು ಮಾತ್ರ ನೀಟ್‌ ಮೂಲಕವೇ ಹಂಚಿಕೆಯಾಗಲಿವೆ.
ಈಗಾಗಲೇ ಮೇ.1 ರಂದು ನಡೆದ ಮೊದಲ ಹಂತದ ನೀಟ್ ಪರೀಕ್ಷೆಯಲ್ಲಿ 6.5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದು, ಎರಡನೇ ಹಂತದ ಪರೀಕ್ಷೆ ಜುಲೈ 24 ರಂದು ನಡೆಯಲಿದೆ. ರಾಜ್ಯಗಳು ಹಾಗೂ ಖಾಸಗಿ ಕಾಲೇಜುಗಳು ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೊಡ್ಡ ಸಂಖ್ಯೆಯಲ್ಲಿ ದೂರು ಬಂದ ಕಾರಣ ಕಳೆದ ತಿಂಗಳು ಸುಪ್ರೀಂ ಕೋರ್ಟ್ ದೇಶಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಬೇಕೆಂದು ಮಹತ್ವರ ಆದೇಶ ಹೊರಡಿಸಿತ್ತು.
ಆದರೆ ಆದೇಶ ಬಂದ ನಂತರ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಒಳಗೊಂಡು ಹಲವು ರಾಜ್ಯಗಳು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಒಂದು ವರ್ಷ ಮುಂದೂಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್