ಜವಹರ್ ಲಾಲ್ ನೆಹರು 
ಪ್ರಧಾನ ಸುದ್ದಿ

ಫೇಸ್ ಬುಕ್ ನಲ್ಲಿ ನೆಹರು ಹೊಗಳಿಕೆ, ವೈರಲ್ ಆಯ್ತು ಪೋಸ್ಟ್: ಐಎಎಸ್ ಅಧಿಕಾರಿ ಎತ್ತಂಗಡಿ

ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ...

ಮಧ್ಯಪ್ರದೇಶ: ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ಗೊಂಡಿರುವ ಘಟನೆ ನಡೆದಿದೆ.

ಅಜಯ್ ಸಿಂಗ್ ಗ್ಯಾಂಗ್ ವಾರ್ ಫೇಸ್ ಬುಕ್ ನಲ್ಲಿ ಹಾಕಿದ ಪೋಸ್ಟ್ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆಗಳಿಸಲಾಗಿದೆ. ನಂತರ ಹಿಂದಿಯಲ್ಲಿ ಹಾಕಿದ್ದ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜವಹರ್ ಲಾಲ್ ನೆಹರು ಅವರು ಮಾಡಿದ್ದ ತಪ್ಪಾದರೂ ಏನು, ಹಿಂದೂ ತಾಲಿಬಾನ್ ರಾಷ್ಟ್ರದಿಂದ ನಮ್ಮನ್ನು ರಕ್ಷಿಸಿದ್ದು ತಪ್ಪಾಯಿತೇ?  ಐಐಟಿ, ಇಸ್ರೋ, ಬಿಎಆರ್ ಸಿ, ಬಿಎಚ್ ಇಎಲ್, ಸೇರಿದಂತೆ ಹಲವು ಸ್ಟೀಲ್ ಫ್ಲಾಂಟ್ ಗಳ, ಜಲಾಶಯಗಳು, ಶಕ್ತಿ ಉತ್ಪನ್ನ ಕೇಂದ್ರಗಳನ್ನು ಸ್ಥಾಪಿಸಿದ್ದು ಅವರ ತಪ್ಪೇ ಎಂದು ಪ್ರಶ್ನಿಸಿದ್ದಾರೆ.

ಹೀಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸ್ಟೇಟಸ್ ಅನ್ನು ಸಾವಿರಾರು ಮಂದಿ ಶೇರ್ ಮಾಡಿದ್ದರು. ಸೇವಾ ನಿಯಮ ಉಲ್ಲಂಘನೆ ಆರೋಪದ ಮೇಲೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಆಗಸ್ಟ್ ನಲ್ಲಿ ಗಾಂಗ್ವಾರ್ ಬದ್ವಾನಿ ಗೆ ನಿಯುಕ್ತಿಗೊಂಡಿದ್ದರು. ಏಕಾಏಕಿ ವರ್ಗಾವಣೆ ಮಾಡಿರುವ ಸರ್ಕಾರ ಯಾವುದೇ ವಿವರಣೆ ನೀಡಿಲ್ಲ.

ಇದನ್ನು ವಿರೋಧಿಸಿರುವ ಕಾಂಗ್ರೆಸ್, ಶಿವರಾಜ್ ಸಿಂಗ್ ಚೌಹಾನ್ ಸರ್ಕಾರದ ಅಸಹಿಷ್ಣುತೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್